Breaking News

ಏ.29ರಿಂದ ಮೇ.6ರವರೆಗೆ 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ

Spread the love

ಬೆಂಗಳೂರು: ಏಪ್ರಿಲ್ 29ರಿಂದ ಮೇ.6ರವರೆಗೆ 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂಬುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ 97,15,109 ಮತದಾರರಿದ್ದಾರೆ. ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 97,15,109 ಮತದಾರರಿದ್ದು, ಈ ಪೈಕಿ 50,24,775 ಪುರುಷ, 46,86,813 ಮಹಿಳೆ, 1,761 ಇತರೆ, 1,760 ಸೇವಾ ಮತದಾರರಿದ್ದಾರೆ. ನಗರದಲ್ಲಿ 1,43,526 ಯುವ ಮತದಾರಿದ್ದು, ಈ ಬಾರಿ ಯುವ ಮತದಾರರ ಸಂಖ್ಯೆ ಹೆಚ್ಚಾಗಿದೆ ಎಂದರು.

80+ ವಯಸ್ಸಿನ ಮತದಾರರು ಹಾಗೂ ವಿಶೇಷ ಚೇತನರಿಗೆ ಏಪ್ರಿಲ್ 29 ರಿಂದ ಮೇ 6ನೇ ತಾರೀಖಿನವರೆಗೂ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಚುನಾವಣಾಧಿಕಾರಿಗಳ ಮುಖಾಂತರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ಅಂಗವಾಗಿ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಅಂಗವಾಗಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ಏಕ ಕಾಲಕ್ಕೆ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಹಮ್ಮಿಕೊಳ್ಳಲು ಚುನಾವಣಾ ಆಯೋಗದ ಸುತ್ತೋಲೆಯಂತೆ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಪ್ರಸ್ತುತ ಚುನಾವಣೆಯ ಮತದಾನ ಮೇ 10 ರಂದು ನಡೆಯಲಿದ್ದು, ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮವನ್ನು ಏಪ್ರಿಲ್ 30 ರಂದು ಬೆಳಗ್ಗೆ 8:00 ಗಂಟೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಏಕ ಕಾಲದಲ್ಲಿ ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದ್ದು, ಪ್ರಾಥಮಿಕವಾಗಿ ಮತಗಟ್ಟೆ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳ ನೇತೃತ್ವದಲ್ಲಿ, ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಬೆಂಗಳೂರು ನಗರ ಜಿಲ್ಲೆಯಾದ್ಯಾಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗುತ್ತದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ