ಬೆಳಗಾವಿ : ಚುನಾವಣಾ ಹೊಸ್ತಿಲಿನಲ್ಲಿ ʻಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆʼ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆಗೆ ಬಿಜೆಪಿ ಶಾಸಕ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಯತ್ನಾಳ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರು ಹೀಗೆಲ್ಲ ಮಾತನಾಡಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ದಿವಾಳಿಯಾಗ್ತಿದೆ. ಈ ಹಿಂದೆ ಪ್ರಧಾನಿ ಮೋದಿ ಮೋದಿ ಬಗ್ಗೆ ಮಾತಾಡಿ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದರು
ಈ ಹಿಂದೆ ಮಣಿಶಂಕರ್ ಅಯ್ಯರ್ ಚಾಯ್ವಾಲಾ ಎಂದು ಟೀಕಿಸಿದ್ರು. ಕಾಂಗ್ರೆಸ್ ನಾಯಕರು ಹೀಗೆ ಮಾತನಾಡಿಯೇ ಕಾಂಗ್ರೆಸ್ ಮುಳುಗಿತು. ಇಂದಿನ ಖರ್ಗೆ ಹೇಳಿಕೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ನ್ನು ಮುಳುಗಿಸುತ್ತೆ. ಪ್ರಧಾನಿ ನರೇಂದ್ರ ಮೋದಿ ಕಂಡರೆ ಕಾಂಗ್ರೆಸ್ನವರಿಗೆ ಭಯ ಎಂದು ಕೆಂಡಾಮಂಡಲರಾಗಿದ್ದಾರೆ.
ಬೆಂಗಳೂರು : ಚುನಾವಣಾ ಹೊಸ್ತಿಲಿನಲ್ಲಿ’ ಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ’ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆಗೆ ಕೇಂದ್ರ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿಸಚಿವೆ ಸ್ಮೃತಿ ಇರಾನಿ ಕಿಡಿ ಕಾರಿದ್ದಾರೆ
ಪ್ರಧಾನಿ ಮೋದಿಯನ್ನು ವಿಷಹಾವಿಗೆ ಹೋಲಿಸಿದ ವಿಚಾರವಾಗಿ ಸ್ಮೃತಿ ಇರಾನಿ ಚುನಾವಣಾ ಪ್ರಚಾರದ ಭಾಷಣದ ವೇಳೆ ಪ್ರಸ್ತಾಪ ಮಾಡಿ ಮಾತನಾಡಿದ್ದಾರೆ. ಈ ಹಿಂದೆ ಆದಿವಾಸಿ ಮಹಿಳೆ ರಾಷ್ಟ್ರಪತಿ ಆದಾಗಲೂ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ. ಹಿಂದೂಗಳನ್ನು ಅಪಮಾನ ಮಾಡುವವರನ್ನು ಕಾಂಗ್ರೆಸ್ ಪಕ್ಷ ಸ್ಟಾರ್ ಪ್ರಚಾರಕ ಮಾಡಿದೆ. ಸೋನಿಯಾ ಆದೇಶದಿಂದ ಮಲ್ಲಿಕಾರ್ಜುನ್ ಖರ್ಗೆ ಮೋದಿಗೆ ಬೈದಿದ್ದಾರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.