ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಪ್ರತಾಪ್ ಸಿಂಹ ನಿಷ್ಪಕ್ಷಪಾತ ಚುನಾವಣೆಗೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

Spread the love

ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಪತ್ರಿಕಾಗೋಷ್ಠಿ.. ಮೈಸೂರು: ವರುಣಾದಲ್ಲಿ ಈ ಬಾರಿ ಸಿದ್ದರಾಮಯ್ಯನವರಿಗೆ ಸೋಲಿನ ಭಯ ಕಾಣಿಸಿಕೊಂಡಿದೆ.

ಹಾಗಾಗಿ ಅವರ ಕಾರ್ಯಕರ್ತರಿಂದ ಸೋಮಣ್ಣ ಪ್ರಚಾರ ಮಾಡುವ ಕಡೆ ತೊಂದರೆ ಆಗುತ್ತಿದೆ. ಚುನಾವಣಾ ಆಯೋಗ ವರುಣಾದಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದರು.

ಮೈಸೂರಿನಲ್ಲಿ ಇಂದು ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ವರುಣಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಗೆ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಕಾರಣ. ಸಿದ್ದರಾಮಯ್ಯ ಅವರಿಗೆ ಸೋಲಿನ ಹತಾಶೆ ಹಾಗೂ ಭೀತಿಯಿಂದ ಈ ರೀತಿ ಮಾಡಿಸುತ್ತಿದ್ದಾರೆ. ವಿಪಕ್ಷ ನಾಯಕರ ಪಾಳಯದಲ್ಲಿ ಸೋಲಿನ ಭಯ ಶುರುವಾಗಿದೆ. ಬಿಜೆಪಿ ಪ್ರಚಾರಕ್ಕೆ ಹೋದ ಕಡೆಯಲ್ಲೆಲ್ಲ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಗಲಾಟೆ ಮಾಡಿಸುವ ಸಣ್ಣತನಕ್ಕೆ ಸಿದ್ದರಾಮಯ್ಯ ಕಡೆಯವರು ಮುಂದಾಗಿದ್ದಾರೆ ಎಂದು ಪ್ರತಾಪ್ ಸಿಂಹ ಆರೋಪಿಸಿದರು.

ನಿನ್ನೆ ಬಿಜೆಪಿ ಚುನಾವಣಾ ಪ್ರಚಾರ ಮೆರವಣಿಗೆ ಮೇಲೆ ಕಲ್ಲು ತೂರಲು ಬಕೆಟ್​​ನಲ್ಲಿ ಕಲ್ಲುಗಳನ್ನು ತಂದಿದ್ದರು. ಸಿದ್ದರಾಮನಹುಂಡಿಯ ಸೋದರನ ಮನೆಯ ಮುಂದೆ ಈ ಘಟನೆ ನಡೆದಿದೆ. ಸಿದ್ದರಾಮಯ್ಯ ಒಬ್ಬ ಜಾತಿವಾದಿ. ಅವರಿಗೆ ತಮ್ಮ ಜಾತಿ ಮುಖ್ಯ ಎಂಬುದು ವರುಣಾ ಜನರಿಗೆ ಗೊತ್ತಾಗಿದೆ. ಈ ಕಾರಣದಿಂದ ಬೇರೆ ಜಾತಿಯವರು ಸೋಮಣ್ಣ ಪರ ನಿಂತಿದ್ದಾರೆ. ಸೋಲಿನ ಭಯದಿಂದ ವರುಣಾದಲ್ಲಿ ಈ ರೀತಿ ಘಟನೆಗಳು ನಡೆಯಲು ಸಿದ್ದರಾಮಯ್ಯ ಕಾರಣ ಎಂದು ಸಂಸದರು ಆರೋಪಿಸಿದರು.

ಬಿಜೆಪಿ- ಕಾಂಗ್ರೆಸ್​ ಕಾರ್ಯಕರ್ತರ ಮಧ್ಯೆ ಗಲಾಟೆ: ಗುರುವಾರ ರಾತ್ರಿ 8 ಗಂಟೆ ಸಮಯದಲ್ಲಿ ವರುಣ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮತ್ತು ಸಂಸದ ಪ್ರತಾಪ್ ಸಿಂಹ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಗಲಾಟೆ ನಡೆದಿತ್ತು. ಈ ವೇಳೆ ಕಲ್ಲು ತೂರಾಟವಾಗಿದ್ದು, ಬಿಜೆಪಿ ಕಾರ್ಯಕರ್ತ ನಾಗೇಶ್ ಎಂಬಾತ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಖರ್ಗೆ ಬಾಯಲ್ಲಿ ಈ ರೀತಿ ಹೇಳಿಕೆ ಸರಿಯಲ್ಲ: ಪ್ರಧಾನಿ ನರೇಂದ್ರ ಮೋದಿ ವಿಷದ ಹಾವು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಸರಿಯಲ್ಲ. ಖರ್ಗೆಯವರು ಹಿರಿಯ ರಾಜಕೀಯ ಮುತ್ಸದ್ದಿ. ಅಂತವರ ಬಾಯಲ್ಲಿ ಈ ರೀತಿ ಹೇಳಿಕೆ ಖಂಡನೀಯ. ಮೋದಿಯವರನ್ನು ಸಿದ್ದರಾಮಯ್ಯ ಏಕ ವಚನದಲ್ಲಿ ಟೀಕಿಸುತ್ತಾರೆ. ಸಿದ್ದರಾಮಯ್ಯನವರ ಸಹವಾಸದಿಂದ ಖರ್ಗೆಯವರಿಗೂ ಅದೇ ಚಾಳಿ ಬಂದಿದೆ. ನಾನು ಖರ್ಗೆಯವರನ್ನ ಗೌರವಿಸುತ್ತೇನೆ. ಅವರ ಮಾತಿನ ಬಗ್ಗೆ ನಾನು ಟೀಕೆ ಮಾಡುವುದಿಲ್ಲ. ಇನ್ನೂ ಮುಂದೆ ಈ ರೀತಿ ಮಾತನಾಡದಂತೆ ಮನವಿ ಮಾಡುತ್ತೇನೆ ಎಂದರು.


Spread the love

About Laxminews 24x7

Check Also

17 ಪಿಎಸ್‌ಐಗಳ ವರ್ಗಾವಣೆ

Spread the loveಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 17 ಪೊಲೀಸ್ ಸಬ್ ಇನ್ಸಪೆಕ್ಟರ್‌ಗಳನ್ನು (ಪಿಎಸ್‌ಐ) ನಗರದ ವಿವಿಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ