Breaking News

ಬೆಳಗಾವಿ ಗ್ರಾಮೀಣ ಕ್ಷೇತದ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಲಕ್ಷ್ಮಿ ಹೆಬ್ಬಾಳ್ಕರ್ ಅಬ್ಬರದ ಪ್ರಚಾರ

Spread the love

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತದ ವಿವಿಧ ಗ್ರಾಮಗಳಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಬ್ಬರದ ಪ್ರಚಾರ ಮುಂದುವರಿಸಿದ್ದಾರೆ.
ಗ್ರಾಮೀಣ  ಕ್ಷೇತ್ರದ ತುಮ್ಮರಗುದ್ದಿ, ಸೋಮನಟ್ಟಿ, ಭೀಮಗಡ, ಕರಿಕಟ್ಟಿ, ಸಿದ್ದನಳ್ಳಿ, ಖನಗಾಂವ (ಬಿಕೆ ಮತ್ತು ಕೆಎಚ್) ಮೊದಲಾದೆಡೆ ಪ್ರಚಾರ ನಡೆಸಿದರು. ಎಲ್ಲೆಡೆ ಜನರು ಹಬ್ಬದ ವಾತಾವರಣದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸ್ವಾಗತಿಸಿದರು. ಮಹಿಳೆಯರು ಆರತಿ ಬೆಳಗಿ ಬರಮಾಡಿಕೊಳ್ಳುತ್ತಿದ್ದರು. ವೃದ್ಧರು ಮನೆಯ ಮಗಳೇ ಬಂದ ರೀತಿಯಲ್ಲಿ ಸಂಭ್ರಮಪಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಯಾವುದೇ ಕಾರಣಕ್ಕೂ ನಿಮ್ಮಂತಹ ಶಾಸಕರನ್ನು ಕಳೆದುಕೊಳ್ಳುವುದಿಲ್ಲ. 
ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ಖಚಿತ. ನಮ್ಮದೇ ಸರ್ಕಾರ ಬಂದಲ್ಲಿ ಇನ್ನೂ ಹೆಚ್ಚಿನ ಕೆಲಸ ತರಲು ಸಹಾಯವಾಗಲಿದೆ. ಜನರ ಸಹಕಾರದೊಂದಿಗೆ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿಯಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗುವುದು. ಕಳೆದ 5 ವರ್ಷದಲ್ಲಿ ನಾನು ಮಾಡಿದ ಅಭಿವೃದ್ಧಿ ನೋಡಿ ಮತ ನೀಡಿ. ಮುಂದಿನ ದಿನಗಳಲ್ಲಿ ಅನೇಕ ದೊಡ್ಡ ದೊಡ್ಡ ಯೋಜನೆಗಳನ್ನು ತರುವ ಉದ್ದೇಶವಿದೆ. ಶೈಕ್ಷಣಿಕವಾಗಿಯೂ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.
ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ, ಶೇಖರ್ ಹೊಸೂರಿ, ಶಿವಶಂಕರ ಮಳಗಲಿ, ಕಲ್ಲಪ್ಪ ಶಿಣಗಿ, ಸತ್ಯಪ್ಪ ನಂದ್ಯಾಗೋಳ, ಗಂಗಾರಾಮ ಯದ್ದಲಗುಡ್ಡ, ಕಲ್ಲಪ್ಪ ಸುತಗಟ್ಟಿ, ವಿಲ್ಸನ್ ಮಹಾರ್, ಮಲ್ಲಪ್ಪ ಗೊಸಾಂವಿ, ಶಿವಶಂಕರ ಪಾಟೀಲ, ಶಿವಾಜಿ ತಳವಾರ, ಶೇಖರ ಶಿಣಗಿ, ಲಕ್ಷ್ಮಣ ಕೆಂಪದಿನ್ನಿ, ಲಕ್ಷ್ಮಣ ಹೊಂಕಳಿ ಇತರರಿದ್ದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ