Breaking News

ನಿಪ್ಪಾಣಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಚಿವೆ ಶಶಿಕಲಾ ಅ ಜೊಲ್ಲೆ ಬಿರುಸಿನ ಪ್ರಚಾರ

Spread the love

ನಿಪ್ಪಾಣಿ ಮತಕ್ಷೇತ್ರದ ಮಾಂಗುರ, ಕುನ್ನುರ, ನಾಂಗನುರ, ಸೌಂದಲಗಾ, ಆಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಅವರು ಮಾತನಾಡಿದರು, ಕಳೆದ ಎರಡು ಬಾರಿ ಶಾಸಕಿಯಾಗಿ ಆಯ್ಕೆ ಮಾಡುವ ಮೂಲಕ ಕ್ಷೇತ್ರದಲ್ಲಿ ಆಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ಸದಾವಕಾಶ ನೀಡಿದ್ದೀರಿ. ನಾನು ಕ್ಷೇತ್ರದ ಮತದಾರರು ನನ್ನ ಮೇಲಿಟ್ಟ ಭರವಸೆಯನ್ನು ಉಳಿಸಿಕೊಂಡಿದ್ದೇನೆ. ಕಳೆದ 10 ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ.ಜನಸಾಮಾನ್ಯರ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದು, ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಿದ್ದೇನೆ. ಈ ಎಲ್ಲಾ ಕಾರ್ಯಗಳ ಹಿನ್ನಲೆಯಲ್ಲಿ ಕ್ಷೇತ್ರದ ಮತದಾರರು ಮತ್ತೊಮ್ಮೆ ಆಶೀರ್ವದಿಸಲಿದ್ದಾರೆ ಎಂದು ಹೇಳಿದರು.

ನಿಪ್ಪಾಣಿ ಕಳೆದ ಎರಡು ಬಾರಿಯ ಅವಧಿಯಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಿದ್ದು, ಜನಸಾಮಾನ್ಯರ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿರುವ ಹಿನ್ನಲೆಯಲ್ಲಿ ಕ್ಷೇತ್ರದ ಜನರ ಆಶೀರ್ವಾದ ಸದಾ ನನ್ನ ಮೇಲಿದೆ ಎಂದು ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾನ್ಯ ಮಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಹೇಳಿದರು. ಕ್ಷೇತ್ರದ ಬಿಜೆಪಿ ಪ್ರಮುಖರು ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿ ಶಶಿಕಲಾ ಅ ಜೊಲ್ಲೆ ಅವರಿಗೆ ಸಾಥ್‌ ನೀಡಿದರು.


Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ