Breaking News

ಹಾಡಹಗಲೇ ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ

Spread the love

ಹಾವೇರಿ: ಹಾಡಹಗಲೇ ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಹಾವೇರಿ ನಗರಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಮಹಿಳೆಯನ್ನು ಮೂಲತಃ ಕಲಬುರಗಿ ಜಿಲ್ಲೆಯ ಬಾಪುನಗರದ ಜಯಶ್ರೀ ಕನ್ವರ್ ಉಪಾದ್ಯ (30) ಎಂದು ಗುರುತಿಸಲಾಗಿದೆ. ಹಾವೇರಿ ನಗರದ ಅಶ್ವಿನಿ ನಗರ, ಶಿವಾಜಿ ನಗರ ಸೇರಿದಂತೆ ನಗರದ ನಾಲ್ಕು ಮನೆಗಳನ್ನು ಈಕೆ ಕಳ್ಳತನ ಮಾಡಿದ್ದಾಳೆ. ಬಂಧಿತ ಆರೋಪಿಯಿಂದ 3,43,500 ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ಹಾಗೂ ನಗದು ಹಣ ಜಪ್ತಿ ಮಾಡಿಕೊಳ್ಳಲಾಗಿದೆ.ಹಾಡಹಗಲೇ ಈ ಮಹಿಳೆ ಪ್ಲಾಸ್ಟಿಕ್ ಆಯುವ ವೇಷದಲ್ಲಿ ಓಡಾಡಿ, ಕಬ್ಬಿಣದ ರಾಡು ಉಪಯೋಗಿಸಿ ಐದೇ ಐದು ನಿಮಿಷದಲ್ಲಿ ಬೀಗ ಒಡೆದು ಕಳ್ಳತನ ಮಾಡುತ್ತಿದ್ದಳು ಎನ್ನಲಾಗಿದೆ.

ಹಾವೇರಿ ನಗರಠಾಣೆಯ ಸಿಪಿಐ ಪ್ರಭಾವತಿ ಶೇತಸನದಿ ನೇತ್ರತ್ವದಲ್ಲಿ ಕಾರ್ಯಚರಣೆ ನಡೆಸಿ ಈ ಖತರ್ನಾಕ್ ಲೇಡಿಯನ್ನು ಅರೆಸ್ಟ್ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


Spread the love

About Laxminews 24x7

Check Also

ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ

Spread the loveಹಾವೇರಿ, ಜೂನ್​ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ  ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ