ಪ್ರಧಾನಿ ಮೋದಿ ಅವರು ವಿಧಾನ ಸಭೆ ಚುನಾವಣೆ ಪ್ರಯುಕ್ತ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಹೀಗಾಗಿ ಭದ್ರತಾ ಕಾರಣಕ್ಕಾಗಿ ಹಲವು ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಹಿನ್ನೆಲೆ ಇಂದು ನಗರದ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧವಿರಲಿದೆ.ಮಧ್ಯಾಹ್ನ 2 ರಿಂದ ಸಂಜೆ 7.30ರವರೆಗೆ ಕೆಲ ರಸ್ತೆಗಳಲ್ಲಿ ನಿರ್ಬಂಧವಿರಲಿದ್ದು, ಪರ್ಯಾಯ ರಸ್ತೆಗಳನ್ನ ಬಳಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.ಯಾವ ರಸ್ತೆಗಳಲ್ಲಿ ಸಂಚಾರ ನಿರ್ಬಂಧ?: ಓಲ್ಡ್ ಏರ್ಪೋರ್ಟ್ ರಸ್ತೆ, ಕಬ್ಬನ್ ರಸ್ತೆ, ಅಂಬೇಡ್ಕರ್ ರಸ್ತೆ, ಕೃಂಬಿಗಲ್ ರಸ್ತೆ, ದೇವಾಂಗ ರಸ್ತೆ, ಕೇಂಬ್ರಿಡ್ಜ್ ಲೇಔಟ್ ರಸ್ತೆ, ಡಿಕನ್ಸನ್ ರಸ್ತೆ,ಲಾಲ್ ಭಾಗ್ ವೆಸ್ಟ್ ಗೇಟ್ ರಸ್ತೆ, ಕೆ.ಆರ್.ಸರ್ಕಲ್, ಆರ್.ವಿ.ಕಾಲೇಜ್ ರಸ್ತೆ,ಲಾಲ್ ಭಾಗ್ ಮುಖ್ಯ ರಸ್ತೆ, ಬಸನವಗುಡಿ 50 ಫೀಟ್ ಕೆನರಾ ಬ್ಯಾಂಕ್ ರಸ್ತೆ. ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗದ ಮೂಲಕ ಸಂಚಾರಕ್ಕೆ ಮನವಿ ಮಾಡಲಾಗಿದೆ.
ಮಾಗಡಿ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಬರುವ ವಾಹನಗಳು ತಾವರೆಕೆರೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಹೆಮ್ಮಿಗೆಪುರ ಕೊಮ್ಮಘಟ್ಟ ಕೆಂಗೇರಿ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದಾಗಿದೆ.ಮಾಗಡಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ತಾವರೆಕೆರೆ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಸೊಂಡೇಕೊಪ್ಪ ನೆಲಮಂಗಲ ಮೂಲಕ ಸಂಚರಿಸಬಹುದು.ತುಮಕೂರು ಕಡೆಯಿಂದ ಬಂದು ನೈಸ್ ರಸ್ತೆಯಲ್ಲಿ ಸಂಚರಿಸುವ ಸರಕು ವಾಹನಗಳು ನೆಲಮಂಗಲ ಸೊಂಡೇಕೊಪ್ಪ ಬೈಪಾಸ್‌ನಲ್ಲಿ ಬಲ ತಿರುವು ಪಡೆದು ಸೊಂಡೇಕೊಪ್ಪ ತಾವರೆಕೆರೆ-ಹೆಮ್ಮಿಗೆಪುರ- ಕೊಮ್ಮಘಟ್ಟ ಕೆಂಗೇರಿ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದು. ನಗರದ ಒಳಭಾಗದಿಂದ ಮಾಗಡಿ ಕಡೆಗೆ ಸಂಚರಿಸುವ ವಾಹನಗಳು ಎಂ.ಸಿ ಸರ್ಕಲ್‌ನಲ್ಲಿ ಎಡ ತಿರುವು ಪಡೆದು ಮೈಸೂರು ರಸ್ತೆ ಕೆಂಗೇರಿ- ಕೊಮ್ಮಘಟ್ಟ- ಹೆಮ್ಮಿಗೆಪುರ – ತಾವರೆಕೆರೆ ಮೂಲಕ ಸಂಚರಿಸಬಹುದು. ನಾಯಂಡಹಳ್ಳಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಮೈಸೂರು ರಸ್ತೆಗೆ ಚಲಿಸಿ ಕೆಂಗೇರಿ ಆರ್ ಆರ್ ಕಾಲೇಜು ಮೂಲಕ ರಾಮೋಹಳ್ಳಿ, ಚಂದ್ರಪ್ಪ ಸರ್ಕಲ್ – ತಾವರೆಕೆರೆ ಮೂಲಕ ಮಾಗಡಿ ರಸ್ತೆ ಮತ್ತು ತುಮಕೂರು ರಸ್ತೆಗೆ ಸಂಚರಿಸಬಹುದು. ಸಿ.ಎಂ.ಟಿ.ಐ ಜಂಕ್ಷನ್‌ನಿಂದ ನಾಯಂಡಹಳ್ಳಿ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಗೊರಗುಂಟೆಪಾಳ್ಯ- ವೆಸ್ಟ್ ಆಫ್ ಕಾರ್ಡ್ ರಸ್ತೆ- ಎಂ.ಸಿ ಸರ್ಕಲ್ – ವಿಜಯನಗರ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದು. ಹಳೇ ರಿಂಗ್ ರಸ್ತೆಯಲ್ಲಿ ಕೆಂಗೇರಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು ಉಲ್ಲಾಳ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಉಲ್ಲಾಳ ವಿಲೇಜ್, ರಾಮಸಂದ್ರ ಬ್ರಿಡ್ಜ್ ಹೆಮ್ಮಿಗೆಪುರ ತಾವರೆಕೆರೆ ಮೂಲಕ ತುಮಕೂರು ರಸ್ತೆಗೆ ಸಂಚರಿಸಬಹುದು. ಇಂದು ರಾಜ್ಯಕ್ಕೆ ಭೇಟಿ: ನರೇಂದ್ರ ಮೋದಿ ಅವರು ಇಂದು ರಾಜ್ಯ ಆಗಮಿಸಿದ್ದು, ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ. ಹುಮ್ನಾಬಾದ್, ಕುಡಚಿ, ವಿಜಯಪುರ, ಬೆಂಗಳೂರು ಉತ್ತರ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ನಾಳೆ (ಭಾನುವಾರ) ಏ.30 ರಂದು ಕೋಲಾರ, ಬೇಲೂರು, ಚೆನ್ನಪಟ್ಟಣ್ಣ, ಮೈಸೂರಿನಲ್ಲಿ ಪಕ್ಷದ ಸಮಾವೇಶ ನಡೆಯಲ್ಲಿದ್ದು ಮೋದಿ ಭಾಗಿಯಾಗಲಿದ್ದಾರೆ