Breaking News

ಕಾಂಗ್ರೆಸ್ 50 ಜನರ ಮನೆಗಳ ಮೇಲೆ ಐಟಿ ಅಧಿಕಾರಿಗಳು ರೇಡ್ ಮಾಡುವ ಸಾಧ್ಯತೆ ಇದೆ.ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬೆಳಗಾವಿ: ಕಾಂಗ್ರೆಸ್ ಮುಖಂಡರ ಮೇಲೆ ಸುಳ್ಳು ಕೇಸು ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಮೂವರು ಮುಖಂಡರನ್ನು ಟಾರ್ಗೆಟ್ ಮಾಡಲಾಗಿದೆ.ಮುಖಂಡರ ಮನೆಗಳ ಮೇಲೆ ಲೋಕಾಯುಕ್ತ ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸುವ ಮಾಹಿತಿ ಇದೆ. ನಮ್ಮ ಪಕ್ಷದ ಮುಖಂಡರ ಶಕ್ತಿ ತಡೆಯುವ ಪ್ರಯತ್ನ ನಡೆದಿದೆ ಎಂದು ದೂರಿದ್ದಾರೆ.

ಸುಮಾರು 50 ಜನರ ಮನೆಗಳ ಮೇಲೆ ಅಧಿಕಾರಿಗಳು ರೇಡ್ ಮಾಡುವ ಸಾಧ್ಯತೆ ಇದೆ. 50 ಅಭ್ಯರ್ಥಿಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಪಕ್ಷದವರೂ ಇದ್ದಾರೆ. 15 ದಿನದ ಹಿಂದೆಯೇ ಐಟಿ ಅಧಿಕಾರಿಗಳು ರಾಜ್ಯಕ್ಕೆ ಬಂದ ಮಾಹಿತಿ ಇದೆ. ಸುಮಾರು ಒಂದು ಸಾವಿರ ಐಟಿ ಅಧಿಕಾರಿಗಳು ರಾಜ್ಯಕ್ಕೆ ಬಂದಿರುವ ಮಾಹಿತಿ ಇದೆ. ಎರಡು ಮೂರು ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಲೋಕಾಯುಕ್ತ, ಐಟಿ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ