Breaking News

ಮನೆಯ ಅಂಗಳದ ಮುಂದೆ ಆಟವಾಡುತ್ತಿದ್ದ ಮಗು ಚರಂಡಿಯಲ್ಲಿ ಮುಳುಗಿ ದಾರುಣ ಸಾವು

Spread the love

ನೆಲಮಂಗಲ(ಬೆ.ಗ್ರಾಮಾಂತರ) : ನಗರದಲ್ಲಿ ಬೆಳಗ್ಗೆ ದುರಂತವೊಂದು ಸಂಭವಿಸಿದೆ. ಮನೆಯ ಮುಂದೆ ಆಟವಾಡುತ್ತಿದ್ದ 11 ತಿಂಗಳ ಮಗು ಮನೆಯ ಮುಂಭಾಗದಲ್ಲಿದ್ದ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ರ್ದುಘಟನೆ ತಾಲೂಕಿನ ಸೋಂಪುರ ಹೋಬಳಿಯ ನಿಡವಂದ ಕಾಲೋನಿಯಲ್ಲಿ ನಡೆದಿದೆ.

 

ಘಟನೆ ವಿವರ: ಬೆಳಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಮನೆಯ ಅಂಗಳದಲ್ಲಿ ಮಗು ಆಟವಾಡಿ, ಮನೆಯ ಮುಂದೆ ನಿಂತಿದ್ದ ಕ್ಯಾಂಟರ್ ಕೆಳಗೆ ನುಸುಳಿ ಹೋಗಿದೆ. ಆದರೆ ಅಲ್ಲೇ ಸುಮಾರು 4 ಅಡಿಯ ಚರಂಡಿಯು ತೆರೆದಿತ್ತು, ಇದೇ ಚರಂಡಿಗೆ ಮಗು ಬಿದ್ದು ಸಾವನ್ನಪ್ಪಿದೆ. ಮನೆಯ ಸುತ್ತಮುತ್ತ ಪೋಷಕರು ಹುಡುಕಾಡಿದರೂ, ಮಗು ಕಾಣಸಿಗಲಿಲ್ಲ.

ನಂತರ ಮಗು ರಾಜ್ ಕುಮಾರ್ (11 ತಿಂಗಳು) ಚರಂಡಿಯಲ್ಲಿ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಉಮೇಶ್ ಸಿಂಗ್, ಅನಿತಾ ದೇವಿ ಮೃತ ರಾಜ್ ಕುಮಾರ್ ಮಗುವಿನ ತಂದೆ ತಾಯಿಯಾಗಿದ್ದಾರೆ. ಇವರು ಬಿಹಾರ ರಾಜ್ಯದ ಬಕ್ಸಾರ್ ಜಿಲ್ಲೆಯ ನೋನ್ ಪುರ ಗ್ರಾಮದವರಾಗಿದ್ದು, ಡಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಸ್ಯಾಟ್ರಾಕ್ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಮಗುವಿನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳೀಯ ಆಡಳಿತದಿಂದ ಚರಂಡಿ ನಿರ್ವಹಣೆ ಸೂಕ್ತವಾಗಿರದ ಹಿನ್ನೆಲೆಯಲ್ಲಿ, ಈ ಘಟನೆ ಸಂಭವಿಸಿದೆ ಎಂದು ಕುಟುಂಬದವರು ಆರೋಪಿಸುತ್ತಿದ್ದಾರೆ. ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

 


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ