Breaking News

ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ: ಶೋಭಾ ಕರಂದ್ಲಾಜೆ 1d

Spread the love

ಶಿವಮೊಗ್ಗ: ‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಪಕ್ಷವು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ಈ ಬಾರಿ ಭಾರತೀಯ ಜನತಾ ಪಾರ್ಟಿ ಪೂರ್ಣ ಬಹುಮತದ ಸರ್ಕಾರವನ್ನು ರಚನೆ ಮಾಡಬೇಕು ಅನ್ನುವ ನಿಟ್ಟಿನಲ್ಲಿ ಕಾರ್ಯಗಳು ಪ್ರಾರಂಭವಾಗಿದೆ. ಕೇಂದ್ರದ ನಮ್ಮ ನಾಯಕರು ರಾಜ್ಯದ ಎಲ್ಲಾ ನಾಯಕರು ಕೂಡ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ” ಎಂದರು.

”ನಮ್ಮ ಸರ್ಕಾರವು ರಾಜ್ಯದ ಜನರಿಗೆ ಕೊಟ್ಟ ಭರವಸೆಗಳು ಈಡೇರಿಸಿದೆ. ನಮ್ಮ ನಾಯಕರು ಮಾಡಿರುವ ಶಿಲಾನ್ಯಾಸವನ್ನು ಕಾಮಗಾರಿ ಮೂಲಕ ಪೂರ್ಣಗೊಳಿಸುವುದು ಸರ್ಕಾರದ ಗುರಿ ಆಗಿದೆ. ಹಿಂದಿನ ಸರ್ಕಾರ ಹಾಗೂ ಇಂದಿನ ಸರ್ಕಾರಕ್ಕೆ ಬಹಳ ವ್ಯತ್ಯಾಸವಿದೆ” ಎಂದು ತಿಳಿಸಿದರು.

ಯಡಿಯೂರಪ್ಪ, ಬೊಮ್ಮಯಿ ನೇತೃತ್ವದಲ್ಲಿ ಅಭಿವೃದ್ಧಿಗೆ ವೇಗ: ”ನಮ್ಮ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕೆಲಸಕ್ಕೆ ವೇಗ ಸಿಕ್ಕಿದೆ. ಹಿಂದೆ ಯಾವುದೇ ಯೋಜನೆ ಮಾಡಬೇಕೆಂದರೆ ದಶಕಗಳ ಕಾಲ ಕಾಯಬೇಕಿತ್ತು. ಆದರೆ ಈಗ ಹಾಗಿಲ್ಲ, ಆಧುನಿಕ ತಂತ್ರಜ್ಞಾನ ಬಳಸಿ ಯೋಜನೆಗಳನ್ನು ಪೂರ್ಣಗೊಳಿಸಲಾಗುತ್ತದೆ. ಕರ್ನಾಟಕವನ್ನು ಅಭಿವೃದ್ಧಿಯತ್ತ ತೆಗೆದುಕೊಂಡು ಹೋಗಬೇಕು ಎನ್ನುವುದೇ ನಮ್ಮ ಗುರಿ. ನಮ್ಮ ಸರ್ಕಾರ ಇಲ್ಲದ ಕಡೆ ಕೇಂದ್ರ ಸರ್ಕಾರವು ನೀಡಿದ ಯೋಜನೆಗಳನ್ನು ಪೂರ್ಣಗೊಳಿಸಲು ಆಗುತ್ತಿಲ್ಲ. ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವೇಗವಾಗಿ ಅಭಿವೃದ್ಧಿ ಆಗಿದೆ” ಎಂದು ಹೇಳಿದರು.

54 ಲಕ್ಷ ರೈತರಿಗೆ ಕಿಸಾನ್ ಸನ್ಮಾನ್ ಯೋಜನೆ ಲಾಭ: ”ಕರ್ನಾಟಕದಲ್ಲಿ ಪಿಎಂ ಕಿಸಾನ್ ಸನ್ಮಾನ್ ಯೋಜನೆಯ ಲಾಭವನ್ನು 54 ಲಕ್ಷ ರೈತರು ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ದೇಶದ ಎಲ್ಲ ರಾಜ್ಯದಲ್ಲಿ ನಡೆಯುವ ಚುನಾವಣೆಗಳ ನೇತೃತ್ವ ವಹಿಸುತ್ತಾರೆ. ಯಾಕೆಂದರೆ, ದೇಶದ ರಕ್ಷಣೆ ಹಾಗೂ ಅಭಿವೃದ್ದಿಗಾಗಿ ಎಲ್ಲ ಕಡೆಗಳಲ್ಲೂ ಬೆಂಬಲ ಸಿಗುತ್ತಿದೆ. ಕರ್ನಾಟಕ ಹಾಗೂ ದೇಶದ ಮುಖಂಡರು ರಾಜ್ಯದ ಬೇರೆ ಬೇರೆ ಜಿಲ್ಲೆಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ಸಲ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ” ಎಂದು ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು.

 

ರಾಜ್ಯದಲ್ಲಿ ನಾಳೆ ಪ್ರಧಾನಿ ಮೋದಿ ಪ್ರವಾಸ: ”ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಈಗಾಗಲೇ ಮಾತನಾಡಿದ್ದಾರೆ. ಇದರಿಂದ ಕಾರ್ಯಕರ್ತರು ಉತ್ಸುಕರಾಗಿದ್ದಾರೆ. ಮೋದಿ ಅವರು ಪ್ರಧಾನಿಯೂ ಹೌದು, ಕಾರ್ಯಕರ್ತರೂ ಹೌದು. ನರೇಂದ್ರ ಮೋದಿ ಅವರು ನಾಳೆ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದಾರೆ. ಜೊತೆಗೆ ಕಾರ್ಯಕರ್ತರಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ. ವಿಶ್ವ ನಾಯಕರಾಗಿರುವ ಪ್ರಧಾನಿಗೆ ಕಾಂಗ್ರೆಸ್​ನ ನಾಯಕರು ಅವಹೇಳನ ಮಾಡುತ್ತಿರುವುದು ನೋವಾಗಿದೆ. ಸೋಲಿನ ಭಯದಲ್ಲಿ ತಮ್ಮ ಮಾನಸಿಕ ಸ್ಥಿಮಿತ ಕಳೆದುಕೊಳ್ಳುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

:

ಶೆಟ್ಟರ್ ನಾಯಕರಾಗಲು ಬಿಜೆಪಿ ಕಾರಣ: ರಾಜ್ಯದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಎಲ್ಲವನ್ನೂ ಕೊಟ್ಟಿದೆ. ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸೇರಿದಂತೆ, ಇವತ್ತು ರಾಜ್ಯದಲ್ಲಿ ನಾಯಕ ಅಂತ ಕರೆಸಿಕೊಳ್ಳುತ್ತಿದ್ದಾರೆಂದರೆ ಅದಕ್ಕೆ ಭಾರತೀಯ ಜನತಾ ಪಕ್ಷ ಕಾರಣ. ಇದನ್ನು ಅವರು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಕರಂದ್ಲಾಜೆ ಟಾಂಗ್ ನೀಡಿದರು.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ