Breaking News

ಹಳ್ಳ ದಾಟುತ್ತಿದ್ದ ಒಂದೇ ಕುಟುಂಬದ ಮೂವರು ನೀರುಪಾಲು.!

Spread the love

ಬೀದರ್ : ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪೂರ್ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಹಳ್ಳ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಕ್ಕು ಕೊಚ್ಚಿ ಹೋದ ಘಟನೆ ನಡೆದಿದೆ.

ಸುನಂಧಾ ಸಂಗಪ್ಪ ಲದ್ದೆ, ಮಗ ಸುಮಿತ್​ ಹಾಗೂ ಮಗಳು ಐಶ್ವರ್ಯ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸಂಗಪ್ಪ ಲದ್ದೆ ಜೊತೆ ಹೊಲಕ್ಕೆ ಹೋಗಿ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಹಳ್ಳದಲ್ಲಿ ಏಕಾಏಕಿ ನೀರು ಹೆಚ್ಚಾಗಿದ್ದರಿಂದ ತಾಯಿ, ಮಕ್ಕಳು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಸಂಗಪ್ಪ ಲದ್ದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿದ ಔರಾದ್ ತಹಶೀಲ್ದಾರ್ ಮಲ್ಲಿಕಾರ್ಜುನ, ಭಾಲ್ಕಿ ವಿಭಾಗದ ಎಎಸ್​ಪಿ ಪೃಥ್ವಿಕ ಶಂಕರ, ಕಮಲನಗರ ಸಿಪಿಐ ಪಂಡಿತ್ ಸಗರ ಹಾಗೂ ಕುಶನೂರ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ