ಬೆಳಗಾವಿ: ಕ್ಷುಲ್ಲಕ ಕಾರಣಕ್ಕಾಗಿ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದೆ.
ಜ್ಯೋತಿ ನಿಖಿಲ್ ಚೋಪಡೆ (19) ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ.
ಕಳೆದ ಐದು ತಿಂಗಳ ಹಿಂದಷ್ಟೇ ಜ್ಯೋತಿ, ಉಚಗಾಂವ ಗ್ರಾಮದ ನಿಖಿಲ್ ಎಂಬಾತನೊಂದಿಗೆ ಪ್ರೇಮ ವಿವಾಹವಾಗಿದ್ದಳು. ತವರು ಮನೆಗೆ ಆಗಮಿಸಿದ್ದ ಜ್ಯೋತಿ ಒಂದಿಲ್ಲದೊಂದು ಬೇಡಿಕೆ ಇಡುತ್ತಿದ್ದಳು. ಇತ್ತೀಚೆಗಷ್ಟೆ ಪೋಷಕರಿಗೆ ಕಾಡಿಬೇಡಿ ಫ್ರೀಡ್ಜ್ ಖರೀದಿಸಿದ್ದಳು. ಇದೀಗ ಸೋಫಾ ಸೆಟ್ ಕೊಡಿಸುವಂತೆ ಬೇಡಿಕೆ ಇಟ್ಟಿದ್ದಳು. ಹಣ ಬಂದ ಕೂಡಲೇ ಕೊಡಿಸುವುದಾಗಿ ತಂದೆ ಹೇಳಿದ್ದರು. ಆದ್ರೆ ತಾಳ್ಮೆ ಕಳೆದುಕೊಂಡ ಜ್ಯೋತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Laxmi News 24×7