Breaking News

ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಉಚ್ಛಾಟನೆ

Spread the love

ಬೆಂಗಳೂರು: ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಪ್ರಮುಖ ರಾಜಕೀಯ ಪಕ್ಷಗಳಿಂದ ಟಿಕೆಟ್ ಕೈತಪ್ಪಿದ ಆಕಾಂಕ್ಷಿಗಳು ಪಕ್ಷದ ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ನಡುವೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿಯನ್ನು ಉಚ್ಛಾಟನೆ ಮಾಡಲಾಗಿದೆ.

ಶಿರಹಟ್ಟಿ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ ಅವರನ್ನು ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಿ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಆದೇಶ ಹೊರಡಿಸಿದೆ.

ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ರಾಮಕೃಷ್ಣ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಳಿಗ್ಗೆಯಷ್ಟೇ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ