Breaking News

ನಾಳೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ.

Spread the love

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ ಜಿ ಪರಮೇಶ್ವರ ಮತ್ತಿತರ ಮುಖಂಡರು ನಾಳೆ ಮಂಗಳವಾರ ಬೆಳಗ್ಗೆ 9.00 ಗಂಟೆಗೆ ಬೆಂಗಳೂರಿನ ವಸಂತನಗರದ ಶಾಂಘರಿಲಾ ಹೋಟೆಲ್ ನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.

ಈಗಾಗಲೇ 6 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಮತ್ತಷ್ಟು ಮಹತ್ವದ ಅಂಶಗಳನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.


Spread the love

About Laxminews 24x7

Check Also

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Spread the loveತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ