Breaking News

ಬಿಜೆಪಿ ನನ್ನ ಆತ್ಮೀಯರ ಮೇಲೆ ಷಡ್ಯಂತ್ರ ರೂಪಿಸುತ್ತಿದ್ದಾರೆ: ವಿನಯ್ ಕುಲಕರ್ಣಿ

Spread the love

ಬೆಳಗಾವಿ: ಇವತ್ತು ಕೋರ್ಟ್ ನನಗೆ ಧಾರವಾಡ (Dharwad) ಜಿಲ್ಲಾ ಪ್ರವೇಶಕ್ಕೆ ಅನುಮತಿ ಕೊಟ್ಟಿಲ್ಲ. ಹೊರಗಡೆ ಇದ್ದುಕೊಂಡೇ ನಾನು ಚುನಾವಣೆ ಮಾಡುತ್ತಿದ್ದೇನೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಹೇಳಿದರು.

ಬೆಳಗಾವಿ (Belagavi)  ಜಿಲ್ಲೆಯ ಕಿತ್ತೂರಿನಲ್ಲಿ ಮನೆ ಮಾಡಿಕೊಂಡು ಇರುವ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿ ವಿನಯ್ ಕುಲಕರ್ಣಿ, ಕ್ಷೇತ್ರದ ಜನ ಇದೀಗ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಮರಳಿ ನನಗೆ ಅವಕಾಶ ಕೊಡಲು ಉತ್ಸುಕರಾಗಿದ್ದಾರೆ ಎಂದು ತಿಳಿಸಿದರು

ನನ್ನ ಮೇಲೆ ಬಿಜೆಪಿ (BJP) ಷಡ್ಯಂತ್ರ ನಡೆಸಿದೆ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧನಿದ್ದೇನೆ. ಏಕೆಂದರೆ ಕೋರ್ಟ್‌ನಲ್ಲಿ ಯರ‍್ಯಾರು ಬಂದು ಕುಳಿತಿರುತ್ತಾರೆ ಎಂಬುದನ್ನು ನೀವು ನೋಡಿದರೆ ನಿಮಗೇ ಗೊತ್ತಾಗುತ್ತದೆ. ನಾನು ಅಷ್ಟೇ ಅಲ್ಲ ರಾಜ್ಯದ ಅನೇಕ ನಾಯಕರ ಮೇಲೆ ಬಿಜೆಪಿ ಷಡ್ಯಂತ್ರ ನಡೆಸಿದೆ. ಇಂದಿಗೂ ಅನೇಕರ ಮೇಲೆ ಐಟಿ ರೇಡ್ ಮಾಡಿಸಲಾಗುತ್ತಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿಯವರು ನಮ್ಮ ಪಿಎ ಮನೆಗಳ ಮೇಲೆ ಐಟಿ ದಾಳಿ ನಡೆಸಿ ಅವರು ಹೊರಗಡೆ ಬರದಂತೆ ಮಾಡಿದರು ಎಂದು ಆರೋಪಿಸಿದರು.

ನನ್ನ ಅವಧಿಯಲ್ಲಿ ಆದಂತಹ ಕೆಲಸಗಳನ್ನು ಮುಂದಿಟ್ಟುಕೊಂಡು ನನ್ನ ಪತ್ನಿ ಹಾಗೂ ಕಾರ್ಯಕರ್ತರು ಮತ ಕೇಳುತ್ತಿದ್ದಾರೆ. ರೈತರಿಗೆ, ವಿದ್ಯಾರ್ಥಿಗಳಿಗೆ, ಯುವಕರಿಗೆ ನಾವು ಕೊಟ್ಟಂತಹ ಯೋಜನೆಗಳು ಇಂದು ನನ್ನ ಕೈ ಹಿಡಿಯುತ್ತಿವೆ. ಕಳೆದ 5 ವರ್ಷಗಳ ಅವಧಿಯಲ್ಲಿ ಬಿಜೆಪಿ ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನೇ ಮಾಡಿಲ್ಲ. ಒಂದೂ ಜನಸಂಪರ್ಕ ಸಭೆ ನಡೆಸಿಲ್ಲ. ಕಾಂಗ್ರೆಸ್‌ಗೆ ಬೆಂಬಲ ನೀಡಿದಂತಹವರಿಗೆ ಕಿರುಕುಳ ನೀಡುವ ಕೆಲಸ ಮಾಡಿದ್ದಾರೆ. 1 ಲಕ್ಷ ರೂ. ಕೊಟ್ಟವರಿಗೆ ಮಾತ್ರ ಮನೆ ಹಾಕಿಸಿಕೊಟ್ಟಿದ್ದಾರೆ ಎಂದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ