Breaking News
Home / ರಾಜಕೀಯ / ರಾಜ್ಯದಲ್ಲಿಂದು ಪ್ರಧಾನಿ ಮೋದಿ 2ನೇ ಹಂತದ ಮತಬೇಟೆ:

ರಾಜ್ಯದಲ್ಲಿಂದು ಪ್ರಧಾನಿ ಮೋದಿ 2ನೇ ಹಂತದ ಮತಬೇಟೆ:

Spread the love

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಹಂತದ ಮತ ಪ್ರಚಾರಕ್ಕೆ ಸಜ್ಜಾಗಿದೆ.

ಇಂದು ಮತ್ತು ನಾಳೆ ಮೋದಿ ರಾಜ್ಯದ ವಿವಿಧೆಡೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಪ್ರಧಾನಿಯವರು 2ನೇ ಹಂತದ ಪ್ರಚಾರದಲ್ಲಿ ಇಂದು (ಮಂಗಳವಾರ) ಚಿತ್ರದುರ್ಗ, ಹೊಸಪೇಟೆ, ಸಿಂಧನೂರು, ಕಲಬುರಗಿಯಲ್ಲಿ ರೋಡ್​ ಶೋ ಮತ್ತು ಸಮಾವೇಶ ನಡೆಸಿದರೆ, ಬುಧವಾರದಂದು ಮೂಡಬಿದಿರೆ, ಅಂಕೋಲ ಹಾಗೂ ಬೈಲಹೊಂಗಲದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವರು.

 

 

ಇಂದು ಎಲ್ಲೆಲ್ಲಿ ಮೋದಿ ಮತಬೇಟೆ?: ಇಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಅಲ್ಲಿಂದ ತೆರಳಿ ವಿಜಯನಗರ ಜಿಲ್ಲಾ ಕೇಂದ್ರವಾದ ಹೊಸಪೇಟೆಯಲ್ಲಿ ಮತ್ತೊಂದು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು.

ಸಂಜೆ 4 ಗಂಟೆಗೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 6.30 ಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ರೋಡ್​ ಶೋ ಮಾಡಲಿದ್ದಾರೆ. ಅಲ್ಲಿಯೇ ಉಳಿದುಕೊಳ್ಳುವ ಪ್ರಧಾನಿ, ಮರುದಿನ ಬುಧವಾರ ಅಲ್ಲಿಂದ ಮಂಗಳೂರಿಗೆ ಆಗಮಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ, ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಮತ್ತು ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ಹಳೇ ಮೈಸೂರು ಭಾಗದಲ್ಲಿ ಪ್ರಚಾರ: ಜೆಡಿಎಸ್​ ಪ್ರಾಬಲ್ಯವಿರುವ ಈ ಭಾಗದ ಹಲವು ಜಿಲ್ಲೆಗಳಲ್ಲಿ ಮೊದಲ ಹಂತದ ಪ್ರಚಾರದಲ್ಲಿ ಪ್ರಧಾನಿ ಮೋದಿ ಈಗಾಗಲೇ ಭರ್ಜರಿ ಪ್ರಚಾರ ನಡೆಸಿದ್ದಾರೆ. ಏಪ್ರಿಲ್​ 29 ಮತ್ತು 30 ರಂದು ಮೈಸೂರು, ಚನ್ನಪಟ್ಟಣ, ಹಾಸನ, ಕೋಲಾರ, ಬೆಂಗಳೂರಿನಲ್ಲಿ ರೋಡ್​ ಶೋ ನಡೆಸಿ ಜನರನ್ನು ಆಕರ್ಷಿಸಿದ್ದಾರೆ.

ಏಪ್ರಿಲ್ 29 ರಂದು ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಬೆಂಗಳೂರಿನಲ್ಲಿ ಪ್ರಚಾರ ನಡಸಿದ್ದ ಪ್ರಧಾನಿ, ಏಪ್ರಿಲ್​ 30 ರಂದು ಹಳೆ ಮೈಸೂರು ಭಾಗದ ಕೆಲವೆಡೆ ಅದ್ಧೂರಿ ಮತಯಾಚನೆ ಮಾಡಿದರು. ಸಿದ್ದರಾಮಯ್ಯ ಸ್ಪರ್ಧಿಸುವ ವಿಚಾರವಾಗಿ ಪ್ರಚಾರಕ್ಕೆ ಬಂದಿದ್ದ ಕೋಲಾರ, ಮಾಜಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ ಅವರ ಕ್ಷೇತ್ರವಾದ ಚನ್ನಪಟ್ಟಣ, ಪಕ್ಷದ ಹಿಡಿತವಿರುವ ಹಾಸನ ಮತ್ತು ಮೈಸೂರಿನಲ್ಲಿ ಪ್ರಧಾನಿ ಈಗಾಗಲೇ ಭರ್ಜರಿ ರೋಡ್​ ಶೋ ನಡೆಸಿದ್ದಾರೆ.

20 ಕಡೆ ಮೋದಿ ರ್ಯಾಲಿ: ರಾಜ್ಯ ಚುನಾವಣಾ ಕಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಹಂತಗಳಲ್ಲಿ 20 ಕಡೆ ಚುನಾವಣಾ ರ‍್ಯಾಲಿ ನಡೆಸಲಿದ್ದಾರೆ. ಸ್ಟಾರ್ ಕ್ಯಾಂಪೇನರ್ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಮತ್ತು ವರ್ಚಸ್ಸನ್ನು ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ