Breaking News

ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರನ್ನು ಮತ್ತೆ ಗೆಲ್ಲಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮನವಿ

Spread the love

ಗೋಕಾಕ: ‘ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರನ್ನು ಮತ್ತೆ ಗೆಲ್ಲಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮನವಿ ಮಾಡಿದರು.

ಇಲ್ಲಿನ ವಾರ್ಡ್‌ ಸಂಖ್ಯೆ 12, 13, 15 ಮತ್ತು 16ರಲ್ಲಿ ಭಾನುವಾರ ಮತಯಾಚಿಸಿ ಅವರು ಮಾತನಾಡಿದರು.

 

ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ಶಶಿಧರ ದೇಮಶೆಟ್ಟಿ ಮಾತನಾಡಿ, ‘ಈ ಕ್ಷೇತ್ರವನ್ನು ರಮೇಶ ಜಾರಕಿಹೊಳಿ ಅಭಿವೃದ್ಧಿಪಡಿಸುವ ಜತೆಗೆ, ಕೊರೊನಾ ಸಂಕಷ್ಟ ಸಮಯದಲ್ಲಿ ಜನರಿಗೆ ಸ್ಪಂದಿಸಿದ್ದಾರೆ. ಅವರನ್ನು ಪುನರಾಯ್ಕೆ ಮಾಡಬೇಕು’ ಎಂದರು.

ಬೆಮುಲ್‌ ನಿರ್ದೇಶಕ ಅಮರನಾಥ ಜಾರಕಿಹೊಳಿ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಸದಸ್ಯರಾದ ಭಾರತಿ ಹತ್ತಿ, ವಿಜಯಲಕ್ಷ್ಮಿ ಜತ್ತಿ, ಮುಖಂಡರಾದ ಅರುಣ ಕರಣಿ, ರಮೇಶ ಮುರಗುಂಡಿ, ಶಿವಾಜಿ ಗಾಯಕವಾಡ, ರಾಮಚಂದ್ರ ಗಾಣಿಗೇರ, ವಿಶ್ವನಾಥ ಬೆಲ್ಲದ, ವಿ.ಜಿ.ಮಿರ್ಜಿ, ಎಚ್.ಡಿ. ಮುಲ್ಲಾ, ಮಹಾಲಿಂಗ ಮಂಗಿ ಇದ್ದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ