Breaking News
Home / ರಾಜಕೀಯ / ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆ ಬಿಡುಗಡೆ: ಇಲ್ಲಿದೆ ʼಕೈ‌ʼ ಗ್ಯಾರೆಂಟಿ ಲಿಸ್ಟ್

ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆ ಬಿಡುಗಡೆ: ಇಲ್ಲಿದೆ ʼಕೈ‌ʼ ಗ್ಯಾರೆಂಟಿ ಲಿಸ್ಟ್

Spread the love

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ‘ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿ ಮಂಗಳವಾರ ಬಿಡುಗಡೆ ಮಾಡಿದರು.

ಪ್ರಣಾಳಿಕೆ ಭರವಸೆಗಳನ್ನು ಈಡೇರಿಸುವ ಪ್ರಮಾಣ ಸಂಕೇತವಾಗಿ ಪ್ರಣಾಳಿಕೆ ಹೊತ್ತಿಗೆಗೆ ಅರಿಶಿನ-ಕುಂಕುಮ ಹಚ್ಚಿ, ವೀಳ್ಯದೆಲೆ ಅಡಿಕೆ ಇಟ್ಟು ಸಾಂಪ್ರದಾಯಿಕವಾಗಿ ಬಿಡುಗಡೆ ಮಾಡಿದರು.

ಪ್ರಣಾಳಿಕೆಯ ಮುಖ್ಯಾಂಶಗಳು:

  1. ಬಿಪಿಎಲ್‌ ಕುಟುಂಬಕ್ಕೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿಯನ್ನು ನೀಡಲಾಗುತ್ತದೆ.
  2. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡಲಾಗುತ್ತದೆ.
  3. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರವವರನ್ನು ಖಾಯಂ ಕೆಲಸಗಾರರನ್ನಾಗಿ ಮಾಡಲಾಗುತ್ತದೆ. ಆರೋಗ್ಯ & ಕುಟುಂಬ ಕಲ್ಯಾಣದಲ್ಲಿ ಕೆಲಸ ಮಾಡುವ ನೌಕರರ ಉದ್ಯೋಗ ಖಾಯಂ
  4. ಗೃಹಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟಿ ವಿದ್ಯುತ್‌ ಉಚಿತವಾಗಿ ನೀಡಲಾಗುತ್ತದೆ.
  5. ಮಹಿಳೆಯರಿಗೆ ಸರ್ಕಾರಿ ಬಸ್‌ ನಲ್ಲಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ
  6. ಆಶಾ ಕಾರ್ಯಕರ್ತೆಯರ ಗೌರವಧನ 8 ರೂ.ಗೆ ಹೆಚ್ಚಳ
  7. ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಯುವಕರಿಗೆ ನೆರವು ( 3 ಸಾವಿರ ರೂ ಸಹಾಯಧನ)
  8. ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನು 1 ವರ್ಷದಲ್ಲಿ ಭರ್ತಿ ಮಾಡಲಾಗುತ್ತದೆ.
  9. ಅಂಗನವಾಡಿ ಕಾರ್ಯಕರ್ತೆಯರ ವೇತನ 15 ರೂ.ಗೆ ಹೆಚ್ಚಿಸಲಾಗುತ್ತದೆ.
  10. ಕೋಮುಗಳ ನಡುವೆ ಯಾವುದೇ ಬಗೆಯ ದ್ವೇಷ ಬಿತ್ತುವ ಬಜರಂಗದಳ,ಪಿಎಫ್‌ ಐ ಸೇರಿದಂತೆ ಇತರ ಯಾವುದೇ ಸಂಘಟನೆಗಳಿದ್ದರೂ ಅದನ್ನು ಕಾನೂನು ಅನುಸಾರವಾಗಿ ನಿಷೇಧ ಮಾಡಲಾಗುವುದು.
  11. ನೀರಾವರಿಗಾಗಿ 5 ವರ್ಷದಲ್ಲಿ 1.50 ಲಕ್ಷ ಕೋಟಿ ರೂ. ಮೀಸಲು
  12. ಬಿಸಿಯೂಟ ನೌಕರರ ಗೌರಧನ 6 ಸಾವಿರ ರೂ.ಗೆ ಹೆಚ್ಚಳ
  13. ರಾತ್ರಿಪಾಳಿಯ ಪೊಲೀಸ್‌ ಸಿಬ್ಬಂದಿ 5000 ರೂ. ವಿಶೇಷ ಭತ್ಯೆ
  14. ಪ್ರತಿ ಜಿಲ್ಲೆಯಲ್ಲಿ ಸೈಬರ್‌ ಠಾಣೆ ನಿರ್ಮಾಣದ ಗುರಿ
  15. ಕನಕಪುರದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ
  16. ಎನ್‌ ಇಪಿಯನ್ನು ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಲಾಗುವುದು.
  17. 4 ವರ್ಷದಲ್ಲಿ ಎಲ್ಲಾ ಪೊಲೀಸ್‌ ಸಿಬ್ಬಂದಿಗೆ ವಸತಿ ಸೌಲಭ್ಯ
  18. ಮುಸ್ಲಿಂಮರ ಶೇ.4 ರಷ್ಟು ಮೀಸಲಾತಿ ಮರುಸ್ಥಾಪನೆ
  19. ಬೆಂಗಳೂರಿನಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೆ ಬಸ್‌ ಸೌಲಭ್ಯ
  20. ಎಲ್ಲಾ ಪೊಲೀಸರಿಗೆ ವರ್ಷಕ್ಕೆ 1 ತಿಂಗಳ ವೇತನ ಹೆಚ್ಚಳ
  21. ಎಸ್‌ ಟಿ ,ಎಸ್‌ ಸಿ ಮೀಸಲಾತಿ ಹೆಚ್ಚಳ ಮಾಡುವುದಾಗಿ ಭರವಸೆ
  22. ನಾಡದೋಣಿ ಮೀನುಗಾರರಿಗೆ 10 ಸಾವಿರ ಹಣಕಾಸಿನ ನೆರವು
  23. ಮೀನುಗಾರಿಕಾ ಕ್ಷೇತ್ರದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ
  24. ಮೀನುಗಾರಿಕಾ ಮಹಿಳೆಯರಿಗೆ 3 ಲಕ್ಷದವರೆಗೆ ಬಡ್ಡಿ ರಹಿತ ಸಾಲ
  25. ಎಸ್‌ ಸಿ ಸಮುದಾಯ ಮೀಸಲಾತಿ ಶೇ 17 ಹೆಚ್ಚಿಸುವ ಭರವಸೆ,ಎಸ್‌ ಟಿ ಸಮುದಾಯ ಮೀಸಲಾತಿ ಶೇ. 7 ಹೆಚ್ಚಿಸುವ ಭರವಸೆ
  26. ಆಟೋ, ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪಿಸುವ ಭರವಸೆ
  27. ಕೋರ್ಟ್‌ ಗಳ ಆಧುನಿಕರಣದ ಭರವಸೆ
  28. ಪತ್ರಕರ್ತರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ಭರವಸೆ
  29. ಮಂಗಳಮುಖಿ ಮಂಡಳಿ ಸ್ಥಾಪಿಸುವ ಭರವಸೆ

ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ, ಡಾ.ಜಿ ಪರಮೇಶ್ವರ್‌ ಹಾಗೂ ಇತರ ಪ್ರಮುಖ ಮುಖಂಡ ಉಪಸ್ಥಿತರಿದ್ದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಡಾ.ಜಿ. ಪರಮೇಶ್ವರ್, ಮಾಜಿ ಸಚಿವೆ ರಾಣಿ ಸತೀಶ್, ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪವನ್ ಖೇರಾ, ವಕ್ತಾರ ಗೌರವ್ ವಲ್ಲಭ್, ಪ್ರೊ. ರಾಜೀವ್ ಗೌಡ, ಪ್ರೊ ಕೆ ಈ ರಾಧಾಕೃಷ್ಣ, ಮತ್ತಿತರರು ಉಪಸ್ಥಿತರಿದ್ದರು.

 

 

 


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ