Breaking News

ಮೇ 10ರಂದು ವೇತನ ಸಹಿತ ರಜೆ

Spread the love

ಬೆಳಗಾವಿ : ಭಾರತ ಚುನಾವಣಾ ಆಯೋಗವು ಮೇ.೧೦ ೨೦೨೩ ಬುಧವಾರ ದಂದು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ನಿಗದಿಪಡಿಸಿದೆ.

ಸದರಿ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ೧೯೫೧ ರ ಪ್ರಜಾ ಪ್ರತಿನಿಧಿ ಕಾಯ್ದೆ,

ಸೆಕ್ಷೆನ್ ೧೩೫ (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ರ್ಟೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-೧೯೬೩ ಕಲಂ ೩ (ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ನಿಯೋಜಕರು ಅನುವು ಮಾಡಿ ಕೊಡಬೇಕಾಗಿ ತಿಳಿಸಿದ್ದಾರೆ.

ತಪ್ಪಿದ್ದಲ್ಲಿ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ