Breaking News

ಯಡಿಯೂರಪ್ಪರನ್ನು ಕೈ ಬಿಟ್ಟರೆ ಕಾಂಗ್ರೆಸ್, ದಳದವರು ಅಧಿಕಾರಕ್ಕೆ ಬರ್ತಾರೆ: ನಾಗೇಶ್

Spread the love

ಕೋಲಾರ: ಯಡಿಯೂರಪ್ಪ ಇಲ್ಲದೆ ಬಿಜೆಪಿಗೆ ಅಸ್ಥಿತ್ವವಿಲ್ಲ, ಅವರು ಪೂರ್ಣಾವಧಿ ಸಿಎಂ ಅಗಿ ಕಾರ್ಯನಿರ್ವಹಿಸುತ್ತಾರೆ ಎಂದು ಕೋಲಾರದಲ್ಲಿ ಅಬಕಾರಿ ಸಚಿವ ಎಚ್ ನಾಗೇಶ್ ಹೇಳಿದ್ದಾರೆ.ಇಂದು ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಅವರು ಈ ರೀತಿ ಹೇಳಿಕೆ ನೀಡುವುದು ತಪ್ಪು ಕೋವಿಡ್ ಸಂದರ್ಭದಲ್ಲಿ ಜನರ ಪ್ರಾಣ ಹೋಗವಂತಹ ವೇಳೆ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ. ಜೊತೆಗೆ ಯತ್ನಾಳ್ ಅವರು ಆಗಾಗ ಈ ರೀತಿ ಹೇಳಿಕೆ ನೀಡುವುದು ಸಹಜ. ಅದೊಂದು ಅವರಿಗೆ ಅಭ್ಯಾಸವಾಗಿದೆ ಎಂದು ತಿಳಿಸಿದರು.

ಅಲ್ಲದೆ ಯಡಿಯೂರಪ್ಪ ಅವರು ಒಂಟಿ ಸಲಗದಂತೆ ಓಡಾಡಿ, ಬಿಜೆಪಿಯನ್ನು ಕಟ್ಟಿ ಬೆಳೆಸಿರುವಂತಹವರು. ಹೀಗಾಗಿ ಯಡಿಯೂರಪ್ಪ ಇಲ್ಲದೆ ಬಿಜೆಪಿಗೆ ಅಸ್ಥಿತ್ವವಿಲ್ಲ. ಜೊತೆಗೆ ಉಳಿಗಾಲವಿಲ್ಲ. ಯಡಿಯೂರಪ್ಪ ಅವರನ್ನು ಕೈ ಬಿಟ್ಟರೆ ಕಾಂಗ್ರೆಸ್ ಹಾಗೂ ದಳದವರು ಅಧಿಕಾರಕ್ಕೆ ಬರುತ್ತಾರೆ. ಹೀಗಾಗಿ ಯತ್ನಾಳ್ ಈ ರೀತಿ ಹೇಳಿಕೆ ನೀಡುವುದು ತಪ್ಪು. ಬಿಜೆಪಿ ಶಿಸ್ತಿನ ಪಕ್ಷ, ಹೀಗಾಗಿ ಯತ್ನಾಳ್ ವಿರುದ್ಧ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿತ್ತೇವೆ ಎಂದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ