Breaking News
Home / ರಾಜಕೀಯ / ಇಂದು ಎಲ್ಲೆಲ್ಲಿ ನರೇಂದ್ರ ಮೋದಿಮತಬೇಟೆ?

ಇಂದು ಎಲ್ಲೆಲ್ಲಿ ನರೇಂದ್ರ ಮೋದಿಮತಬೇಟೆ?

Spread the love

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದು (ಬುಧವಾರ) ಕರಾವಳಿ, ಕಿತ್ತೂರು ಕರ್ನಾಟಕದಲ್ಲಿ ನಡೆಯುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಬೇಟೆ ನಡೆಸುವರು.

Image

 

ಎಲ್ಲೆಲ್ಲಿ?: ಬೆಳಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಇದಾದ ನಂತರ ಉತ್ತರ ಕನ್ನಡ ಜಿಲ್ಲೆಗೆ ತೆರಳಿ ಅಂಕೋಲಾದಲ್ಲಿ ಮಧ್ಯಾಹ್ನ 1.15 ಗಂಟೆಗೆ ಜರುಗಲಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಜೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ 3.45ಕ್ಕೆ ನಡೆಯಲಿರುವ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ

ಮೇ 6ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಗೋವಿಂದರಾಜನಗರ, ವಿಜಯನಗರ, ಚಿಕ್ಕಪೇಟೆ, ಬಸನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಜಯನಗರ, ಬೊಮ್ಮನಹಳ್ಳಿ ಕ್ಷೇತ್ರಗಳ ಕಾರ್ಯಕರ್ತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಮೇ 7ರಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುವರು.

ಹಳೇ ಮೈಸೂರು ಭಾಗದಲ್ಲಿ ಪ್ರಚಾರ: ಜೆಡಿಎಸ್​ ಪ್ರಾಬಲ್ಯವಿರುವ ಈ ಭಾಗದ ಹಲವು ಜಿಲ್ಲೆಗಳಲ್ಲಿ ಮೊದಲ ಹಂತದ ಪ್ರಚಾರದಲ್ಲಿ ಮೋದಿ ಈಗಾಗಲೇ ಭರ್ಜರಿ ಕ್ಯಾಂಪೇನ್ ಮಾಡಿದ್ದಾರೆ. ಏಪ್ರಿಲ್​ 29 ಮತ್ತು 30 ರಂದು ಮೈಸೂರು, ಚನ್ನಪಟ್ಟಣ, ಹಾಸನ, ಕೋಲಾರ, ಬೆಂಗಳೂರಿನಲ್ಲಿ ರೋಡ್​ ಶೋ ನಡೆಸಿ ಜನರನ್ನು ಆಕರ್ಷಿಸಿದ್ದರು.

ಏಪ್ರಿಲ್ 29 ರಂದು ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಬೆಂಗಳೂರಿನಲ್ಲಿ ಪ್ರಚಾರ ನಡಸಿದ್ದ ಮೋದಿ, ಏಪ್ರಿಲ್​ 30 ರಂದು ಹಳೆ ಮೈಸೂರು ಭಾಗದ ಕೆಲವೆಡೆ ಅದ್ಧೂರಿಯಾಗಿ ಮತಯಾಚಿಸಿದ್ದರು. ಸಿದ್ದರಾಮಯ್ಯ ಸ್ಪರ್ಧಿಸುವ ವಿಚಾರವಾಗಿ ಪ್ರಚಾರಕ್ಕೆ ಬಂದಿದ್ದ ಕೋಲಾರ, ಮಾಜಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ ಅವರ ಕ್ಷೇತ್ರ ಚನ್ನಪಟ್ಟಣ, ಪಕ್ಷದ ಹಿಡಿತವಿರುವ ಹಾಸನ ಮತ್ತು ಮೈಸೂರಿನಲ್ಲಿ ಪ್ರಧಾನಿ ಈಗಾಗಲೇ ಭರ್ಜರಿ ರೋಡ್​ ಶೋ ನಡೆಸಿದ್ದಾರೆ.

ಮೇ 2ರಂದು ಚಿತ್ರದುರ್ಗ, ವಿಜಯನಗರ ಜಿಲ್ಲಾ ಕೇಂದ್ರವಾದ ಹೊಸಪೇಟೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಂಡಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ಮಂಗಳವಾರ ಸಂಜೆ ಬೃಹತ್ ರೋಡ್​ ಶೋ ನಡೆಸಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ