Breaking News

ಬೆಳಗಾವಿಗೆ ಎಂಟ್ರಿಕೊಟ್ಟಿದ್ದಾರೆಪ್ರಧಾನಿ ನರೇಂದ್ರ ಮೋದಿ

Spread the love

ಬೆಳಗಾವಿ: ವಿಧಾನಸಭಾ ಚುನಾವಣೆಗೆ ಒಂದು ವಾರ ಮಾತ್ರ ಬಾಕಿ ಇದ್ದು, ಬಿಜೆಪಿ ಪರ ಮತ ಬೇಟೆಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಎಂಟ್ರಿಕೊಟ್ಟಿದ್ದಾರೆ. ಕೇಸರಿ ಪಾಳಯದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲವಾಡ ಕ್ರಾಸ್ ನಲ್ಲಿ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕವನ್ನು ದೇಶದಲ್ಲೇ ನಂಬರ್ 1 ರಾಜ್ಯವನ್ನಾಗಿ ಮಾಡುವುದಾಗಿ ಭರವಸೆ ನೀಡಿದರು.

ಕಾಂಗ್ರೆಸ್, ಜೆಡಿಎಸ್ ನವರು ಕೇವಲ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದಾರೆ. ಕರ್ನಾಟಕದ ಜನತೆಗೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ದ್ರೋಹಬಗೆದಿವೆ. ಜಾತಿ ಜಾತಿ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದ್ದಾರೆ. ಎರಡೂ ಪಕ್ಷಗಳ ಬಗ್ಗೆ ಜನರು ಎಚ್ಚರಿಕೆಯಿಂದ ಇರುವಂತೆ ಹೇಳಿದರು.

ಕಳೆದ 3-4 ದಿನಗಳಿಂದ ರಾಜ್ಯದ ಹಲವೆಡೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಡಬಲ್ ಇಂಜಿನ್ ಸರ್ಕಾರದ ಶಂಕನಾದ ಮೊಳಗಿದೆ. ಮಹಿಳೆಯರು, ವೃದ್ಧರು, ಯುವಕರು ಎಲ್ಲರೂ ಉತ್ಸಾಹದಲ್ಲಿದ್ದಾರೆ. ಅವರೆಲ್ಲರ ಮಂತ್ರ ಈ ಬಾರಿ ಒಂದೇ ಆಗಿದೆ. ಅದು ಈಬಾರಿಯ ನಿರ್ಧರ ಬಹುಮತದ ಬಿಜೆಪಿಯ ಸರ್ಕಾರ ಎಂದು. ಕರ್ನಾಟಕದ ಜನ ಈ ಬಾರಿ ಸ್ಥಿರ ಬಿಜೆಪಿ ಸರ್ಕಾರ ತರಲು ತೀರ್ಮಾನಿಸಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ