Breaking News

ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊಪ್ಪಳ ಜಿಲ್ಲಾಧಿಕಾರಿ ಷೋಕಾಸ್ ನೋಟಿಸ್ ನೀಡಿದ್ದಾರೆ.

Spread the love

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಅವಹೇಳನಕಾರಿ ಮತ್ತು ನಿಂದನಾತ್ಮಕವಾಗಿ ಹೇಳಿಕೆ ನೀಡಿದ ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಸಹ ಆದ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕಾಂಗ್ರೆಸ್ ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಬಿಸಿ ಮುಟ್ಟಿಸಿದ್ದು, ಇಬ್ಬರಿಗೂ ಷೋಕಾಸ್ ನೋಟಿಸ್ ಜಾರಿ ಮಾಡಿದೆ.

 

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಟೀಕಿಸಿದ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್​​ ಜಾರಿ ಮಾಡಿದೆ. ಪ್ರಧಾನಿಯವರನ್ನು ವೈಯಕ್ತಿಕವಾಗಿ ಅವಹೇಳನಕಾರಿಯಾಗಿ ಟೀಕಿಸಿರುವುದು ಮಾದರಿ ಚುನಾವಣೆ ನೀತಿ ಸಮಿತಿಯ ಉಲ್ಲಂಘನೆ ವ್ಯಾಪ್ತಿಗೆ ಒಳಪಡುತ್ತದೆ. ನಿಮ್ಮ ಮೇಲೆ ಏಕೆ ನೀತಿ ಸಂಹಿತೆ ಉಲ್ಲಂಘನೆ ಕಾಯ್ದೆ ಅಡಿ ಕ್ರಮ ಜರುಗಿಸಬಾರದು ಎಂದು ನೋಟಿಸ್​ನಲ್ಲಿ ಕೇಂದ್ರ ಚುನಾವಣಾ ಆಯೋಗ ಹೇಳಿದೆ.

ಭಾರತೀಯ ಜನತಾ ಪಕ್ಷದ ಮುಖಂಡರುಗಳು ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿದ ಆಯೋಗವು, ಪ್ರಿಯಾಂಕ್ ಖರ್ಗೆ ಅವರಿಗೆ ವಿವರಣೆ ಕೇಳಿ ಷೋಕಾಸ್ ನೋಟಿಸ್​​ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ವೈಯಕ್ತಿಕ ಟೀಕೆ ಮಾಡಿದ ಆರೋಪದ ಸಂಬಂಧ ನಾಳೆ ಸಂಜೆಯೊಳಗೆ ಉತ್ತರ ನೀಡುವಂತೆ ಸೂಚಿಸಿದೆ.

ಪ್ರಧಾನಿಯವರನ್ನು ವೈಯಕ್ತಿಕವಾಗಿ ಟೀಕಿಸಿದ ಬಗ್ಗೆ ಮಾದರಿ ಚುನಾವಣೆ ನೀತಿ ಸಂಹಿತೆ ಕಾಯ್ದೆಯಡಿ ನಿಮ್ಮ ಮೇಲೆ ಏಕೆ ಕ್ರಮ ತಗೆದುಕೊಳ್ಳಬಾರದೆಂದು ಕೇಂದ್ರ ಚುನಾವಣೆ ಆಯೋಗವು ಷೋಕಾಸ್ ನೋಟಿಸ್​ನಲ್ಲಿ ಪ್ರಶ್ನಿಸಿದ್ದು, ಉತ್ತರವು ತೃಪ್ತಿಕರವಾಗಿಲ್ಲದಿದ್ದರೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಾಯ್ದೆ ಅಡಿ ಕ್ರಮ ಜರುಗಿಸುವ ಇಂಗಿತವನ್ನು ಕೇಂದ್ರ ಚುನಾವಣಾ ಆಯೋಗ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಪಕ್ಷದ ಹೈಕಮಾಂಡ್​​ ಆದ ಎಐಸಿಸಿ ಮಾಜಿ ಅದ್ಯಕ್ಷೆ ಸೋನಿಯಾ ಗಾಂಧಿಯವರಿಗೆ ‘ವಿಷಕನ್ಯೆ’ ಎಂದು ನಿಂದಿಸಿದ ಬಿಜೆಪಿ ಹಿರಿಯ ಮುಖಂಡರಾದ ಸ್ಟಾರ್ ಕ್ಯಾಂಪೇನರ್​​ಗಳಲ್ಲಿ ಒಬ್ಬರಾದ ಮಾಜಿ ಕೇಂದ್ರ ಸಚಿವ ಹಾಗೂ ವಿಜಯಪುರದ ಬಿಜೆಪಿ ಅಭ್ಯರ್ಥಿಯಾದ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊಪ್ಪಳ ಜಿಲ್ಲಾಧಿಕಾರಿ ಷೋಕಾಸ್ ನೋಟಿಸ್ ನೀಡಿದ್ದಾರೆ.


Spread the love

About Laxminews 24x7

Check Also

81 ಸಕ್ಕರೆ ಕಾರ್ಖಾನೆಗಳ ಇಳುವರಿ ಪ್ರಮಾಣ, ಸಾಗಾಟ ಮತ್ತು ಕಟಾವು ವೆಚ್ಚದ ಮಾರ್ಗಸೂಚಿಯ ಸಮಗ್ರ ವರದಿ ಇಲ್ಲಿದೆ.

Spread the loveಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚುವರಿ ದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ