Breaking News

ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ನಿಂತಿದ್ದ ಜಾಗದ ಬಳಿಯೇ ಬೆಂಕಿ

Spread the love

ಕಾರವಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಬಡಿದು ಹೆಲಿಕಾಪ್ಟರ್ ಗಾಜು ಪುಡಿ ಪುಡಿಯಾಗಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ. ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ಹೆಲಿಪಾಡ್ ನ ಪಕ್ಕದಲ್ಲಿಯೇ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿಯ ರಾಮತೀರ್ಥ ಬಳಿ ನಡೆದಿದೆ.

ಡಿ.ಕೆ.ಶಿವಕುಮಾರ್ ಅವರು ಹೊನ್ನಾವರ ಬಳಿಯ ರಾಮತೀರ್ಥ ಹೆಲಿಪ್ಯಾಡ್ ಗೆ ಆಗಮಿಸಿದ್ದು, ಹೆಲಿಕಾಪ್ಟರ್ ನಿಲ್ಲಿಸಿದ್ದ ಜಾಗದ ಪಕ್ಕದಲ್ಲಿಯೇ ಬೆಂಕಿ ಹೊತ್ತಿಕೊಂಡಿದೆ. ಹೆಲಿಕಾಪ್ಟರ್ ಗೆ ಸಿಗ್ನಲ್ ಕೊಡುವ ಸ್ಮೋಕ್ ಕ್ಯಾಂಡಲ್ ನಿಂದಾಗಿ ಹಿಲಿಪ್ಯಾಡ್ ನ ಬಳಿ ಒಣಗಿದ ಹುಲ್ಲಿಗೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ.

ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಅದೃಷವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ