Breaking News

ಕೋಲಾರ: ದಾಖಲೆಯಿಲ್ಲದ ಕಂತೆ ಕಂತೆ ಹಣ ವಶಕ್ಕೆ

Spread the love

ಕೋಲಾರ: ಕೆ.ಜಿ.ಎಫ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ದಾಖಲೆಯಿಲ್ಲದೇ ಸಂಗ್ರಹಿಸಿಡಲಾಗಿದ್ದ 4 ಕೋಟಿಗೂ ಹೆಚ್ಚು ಹಣವನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಹಂಚಾಳ ಬಳಿ ಇರುವ ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್‌ನ ವಿಲ್ಲಾ ಇರಿಸಿದ್ದ ಕಂತೆ ಕಂತೆ ಹಣವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ ಅನ್ನುವವರಿಗೆ ಸೇರಿದ ವಿಲ್ಲಾ ಇದಾಗಿದ್ದು, ಖಚಿತ ಮಾಹಿತಿ ಮೇರೆಗೆ ಕೆಜಿಎಫ್ ಎಸ್ಪಿ ಧರಣಿದೇವಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ

ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್ 279 ನಂಬರ್ ವಿಲ್ಲಾದಲ್ಲಿ ಪತ್ತೆಯಾದ ಹಣವನ್ನು ದಾಖಲೆಯಿಲ್ಲದೇ ಸಂಗ್ರಹಿಸಿದ್ದು, ಬಂಗಾರಪೇಟೆ ಪಂಚಾಯತಿ ಹೆಸರು ಬರೆದು ಬಂಡಲ್ ಅನ್ನು ಕಟ್ಟಿ ಇಟ್ಟಿದ್ದ ಹಣ ಇದಾಗಿದೆ. ಕೆಜಿಎಫ್ ಎಸ್ಪಿ ಧರಣಿದೇವಿ ನೇತೃತ್ವದಲ್ಲಿ ನಡೆದ ದಾಳಿ ವಿಚಾರ ತಿಳಿಯುತ್ತಿದ್ದಂತೆ, ಕಾರ್ ಅಲ್ಲೇ ಬಿಟ್ಟು ಮಾಲೀಕ ರಮೇಶ್ ಪರಾರಿಯಾಗಿದ್ದಾರೆ.

ಮೊದಲಿಗೆ ವಿಲ್ಲಾದಲ್ಲಿದ್ದ 2 ಕೋಟಿ 54 ಲಕ್ಷ ಹಾಗೂ ಕಾರ್‌ನ ಬೀಗ ಒಡೆದ ವೇಳೆ, ಕಾರ್​ನೊಳಗೆ ಮೂರು ಗೋಣಿ ಚೀಲದಲ್ಲಿದ್ದ ಒಂದೂವರೆ ಕೋಟಿ ಹಣ ಇರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ