Breaking News

ತನ್ನ ಸರ್ವಿಸ್ 303 ರೈಪಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾನಸ್ಟೇಬಲ್

Spread the love

ಕಲಬುರಗಿ: ಜಿಲ್ಲೆಯ ಚಿತ್ತಾಪುರ(Chittapur) ಪಟ್ಟಣದಲ್ಲಿ ಕಾನಸ್ಟೇಬಲ್​ಲೊಬ್ಬ ತನ್ನ ಸರ್ವಿಸ್ 303 ರೈಫಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿತ್ತಾಪುರ ಪಟ್ಟಣದ ತಹಶಿಲ್ದಾರ್ ಕಚೇರಿಯ ಮಹಡಿ ಮೇಲೆ ಹೋಗಿ 34 ವರ್ಷದ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಲಬುರಗಿ: ಗುಂಡು ಹಾರಿಸಿಕೊಂಡು ಕಾನ್ಸ್​​ಟೇಬಲ್ ಆತ್ಮಹತ್ಯೆ

ಚುನಾವಣೆ ಕರ್ತವ್ಯದಲ್ಲಿದ್ದ ಮಲ್ಲಿಕಾರ್ಜುನ, ಇಂದು(ಮೇ.4) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತ ಜಿಲ್ಲೆಯ ಶಹಬಾದ್ ಪಟ್ಟಣದ ನಿವಾಸಿಯಾಗಿದ್ದ ಮಲ್ಲಿಕಾರ್ಜುನ, ಕಳೆದ ಕೆಲ ವರ್ಷಗಳಿಂದ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದ್ರೆ ಇದೀಗ ಏಕಾಎಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಉಡುಪಿ: ಸೆಪ್ಟೆಂಬರ್ 7ರಂದು ಖಗ್ರಾಸ ಚಂದ್ರಗ್ರಹಣ; ಕೆಂಬಣ್ಣದ ಚಂದಿರನ ದರ್ಶನ

Spread the love ಉಡುಪಿ: ಸೆ.7ರ ಹುಣ್ಣಿಮೆಯ ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಖಗ್ರಾಸ ಚಂದ್ರ ಗ್ರಹಣದ ವೇಳೆ, ಚಂದ್ರನು ತಾಮ್ರದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ