Breaking News

ಅವಿವಾಹಿತ ಯುವಕರಿಗೆ ಮದುವೆ ಭಾಗ್ಯ: ಪಕ್ಷೇತರ ಅಭ್ಯರ್ಥಿಗಳ ವಿನೂತನ ಪ್ರಣಾಳಿಕೆ

Spread the love

ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನಕ್ಕೆ ಕ್ಷಣಗಣನೆ ಶುರುವಾಗಿದ್ದು, ಈಗಾಗಲೇ ಪ್ರಬಲ ರಾಜಕೀಯ ಪಕ್ಷಗಳು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿ ಎಲ್ಲರ ಹುಬ್ಬೇರಿಸುವಂತೆ ಮಾಡಿವೆ.

ಈ ನಡುವೆ ಬೆಳಗಾವಿ ಜಿಲ್ಲೆಯ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ನಾವು ಯಾರಿಗೂ ಕಮ್ಮಿ ಇಲ್ಲ ಎಂಬಂತೆ ವಿನೂತನ ರೀತಿ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮತದಾರರ ಗಮನ ಸೆಳೆದಿದ್ದಾರೆ.

ಹೌದು, ಅರಭಾವಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ್ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಂಡಲೀಕ ಕುಳ್ಳೂರ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದವರು. ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವುದಾಗಿ ಅಭ್ಯರ್ಥಿಗಳು ಪ್ರಣಾಳಿಕೆಯಲ್ಲಿ ಘೋಷಿಸಿದ್ದಾರೆ. ಗುರುಪುತ್ರ ಕುಳ್ಳೂರ ಹಾಗೂ ಪುಂಡಲೀಕ ಕುಳ್ಳೂರ ಇಬ್ಬರು ಸಹೋದರರಾಗಿದ್ದು, ಪಕ್ಷೇತರರಾಗಿ ಅರಭಾವಿ ಹಾಗೂ ಗೋಕಾಕ್‌ನಿಂದ ಸ್ಪರ್ಧಿಸಿದ್ದಾರೆ.

 ಪಕ್ಷೇತರ ಅಭ್ಯರ್ಥಿಗಳ ವಿನೂತನ ಪ್ರಣಾಳಿಕೆಎರಡೂ ಮತಕ್ಷೇತ್ರದ ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವ ಭರವಸೆಯನ್ನು ಘೋಷಣೆ ಮಾಡುವ ಮೂಲಕ ತೀವ್ರ ಚರ್ಚೆಗೆ ಗ್ರಾಸವಾಗಿದ್ದಾರೆ. ಇದೆ ತಿಂಗಳ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ರಾಜ್ಯದ ಎಲ್ಲಾ ಕ್ಷೇತ್ರ ಆಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಪಕ್ಷೇತರ ಅಭ್ಯರ್ಥಿಗಳ ವಿಶೇಷ ಪ್ರಣಾಳಿಕೆ :

  • ವಧು ವರರ ಮದುವೆ ಭಾಗ್ಯ ಯೋಜನೆ 2023 ಗ್ಯಾರಂಟಿ 100%
  • ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಾಗುವುದು
  • ಪ್ರತಿ ಖಾತೆಗೆ 31,600 ರೂ. ಜಮೆ ಮಾಡಿಸಲಾಗುವುದು
  • ರೈತರಿಗೆ ಉಚಿತ ಬೋರವೆಲ್
  • ನಿರುದ್ಯೋಗಿ ಯುವಕರಿಗೆ ಉದ್ಯೋಗ ಕೊಡುವುದು
  • ವಸತಿ ರಹಿತರಿಗೆ 3 ಲಕ್ಷದಿಂದ 5 ಲಕ್ಷ ರೂ.ವರೆಗೆ ಮನೆಯನ್ನು ಮಂಜೂರು ಮಾಡಲಾಗುವುದು
  • ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 5 ಲಕ್ಷದಿಂದ 10 ಲಕ್ಷದ ವರೆಗೆ ಸಬ್ಸಿಡಿ ಸಾಲವನ್ನು ಸರಕಾರದಿಂದ ಮಂಜೂರು ಮಾಡಿಸುವುದು ಸೇರಿ ಇನ್ನಿತರ ಆಶ್ವಾಸನೆಗಳನ್ನು ನೀಡಿದ್ದಾರೆ.

Spread the love

About Laxminews 24x7

Check Also

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್‌ ಕೊನೆಗೂ ರಾಜೀನಾಮೆ

Spread the loveಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ