Breaking News

P.M. ಮೋದಿ ವಿರುದ್ಧ ದೂರು

Spread the love

ಬೆಂಗಳೂರು: ಬಜರಂಗದಳ ನಿಷೇಧ ಪ್ರಸ್ತಾವ ಮುಂದಿಟ್ಟು “ಜೈ ಬಜರಂಗಬಲಿ ಎಂದು ಘೋಷಣೆ ಕೂಗಿ ಓಟಿನ ಬಟನ್‌ ಒತ್ತಿ” ಎಂದು ಕರೆ ನೀಡುವ ಮೂಲಕ ಧಾರ್ಮಿಕ ಭಾವನೆ ಕೆರಳಿಸುವ ಮತ್ತು ಶಾಂತಿಗೆ ಭಂಗ ಉಂಟು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಕಾಂಗ್ರೆಸ್‌ ಪಕ್ಷ ಚುನಾವಣ ಆಯೋಗಕ್ಕೆ ದೂರು ನೀಡಿದೆ.

ಜಾತಿ-ಧರ್ಮದ ಆಧಾರದಲ್ಲಿ ಮತ ಕೇಳು ವಂತಿಲ್ಲ. ಆದರೆ ಮೋದಿ ಚುನಾವಣ ರ್ಯಾಲಿ ಯಲ್ಲಿ ಹಿಂದೂ ದೇವತೆಗಳ ಹೆಸರನ್ನು ಬಳಸಿ ದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.

ಜತೆಗೆ ಕಾಂಗ್ರೆಸ್‌ ಪ್ರಣಾಳಿಕೆ ಸುಟ್ಟು ಹಾಕಿದ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ವಿರುದ್ಧವೂ ದೂರು ಸಲ್ಲಿಸಲಾಗಿದೆ.

ದೂರನ್ನು ಪರಿಶೀಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ