Breaking News

ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸುತ್ತೇನೆ ಎಂದಸುಮಲತಾ

Spread the love

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 5 ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳ ನಾಯಕರು ಅಭ್ಯರ್ಥಿಗಳ ಪರ ಭರ್ಜರಿ ಮತಬೇಟೆಯಲ್ಲಿ ತೊಡಗಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಸಂಸದೆ ಸುಮಲತಾ ಇದ್ದಕ್ಕಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿರುವ ಘಟನೆ ನಡೆದಿದೆ.

ನೆಲಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ಸುಧಾ ಪರ ಚುನಾವಣ ಅಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಹೇಳಿದರು.

ಅಂಬರೀಶ್ ಅವರು 27 ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದರು. ಅಂಬರೀಶ್ ನಿಧನ ಬಳಿಕ ಕಾಂಗ್ರೆಸ್ ನಲ್ಲಿ ನನಗೆ ಅವಕಾಶ ಸಿಗಲಿಲ್ಲ. ಆಗ ಪಕ್ಷೇತರಳಾಗಿ ನಿಲ್ಲಬೇಕಾಯ್ತು. ಆಸಂದರ್ಭದಲ್ಲಿ ನನ್ನ ಗೆಲುವಿಗಾಗಿ ಬಿಜೆಪಿ, ಕಾಂಗ್ರೆಸ್, ರೈತ ಸಂಘದ ಕಾರ್ಯಕರ್ಯರು ಶ್ರಮಿಸಿ ಗೆಲ್ಲಿಸಿದರು. ಆದರೆ ರಾಜಕೀಯದ ಬದಲಾದ ಸನ್ನಿವೇಶದಲ್ಲಿ ನಾನು ಬಿಜೆಪಿ ಬೆಂಬಲಿಸುವ ತೀರ್ಮಾನ ಕೈಗೊಳ್ಳಬೇಕಾಯ್ತು ಇದರಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವಾಗಿದೆ. ಇದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ