Breaking News

ರಾಹುಲ್‌ ಗಾಂಧಿ ನಾಳೆ ಬೆಳಗಾವಿಗೆ:ಸತೀಶ್‌ ಜಾರಕಿಹೊಳಿ

Spread the love

ಬೆಳಗಾವಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ನಾಳೆ ಬೆಳಗಾವಿಗೆ ಆಗಮಿಸುತ್ತಿದ್ದು, ಯಮಕನಮರಡಿ ಮತಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಂಡಿರುವ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು.

ಯಮಕನಮರಡಿ ಮತಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ನಡೆಯುವ ಕಾರ್ಯಕ್ರಮದ ಸ್ಥಳವನ್ನು ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ನಡೆಯುವ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆಯಲ್ಲಿ25 ಸಾವಿರ ಜನ ಸೇರುವ ನಿರೀಕ್ಷೆಇದೆ ಎಂದರು.

ರಾಜ್ಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯನವರು ಸೇರಿದಂತೆ ಅನೇಕ ನಾಯಕರು ಹಲವು ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಕೊನೆಯ ನಾಲ್ಕು ದಿನಗಳಲ್ಲಿ ಇನ್ನೂಳಿದ ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ನಾಯಕರು ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಿದರು.

ಅಮಿತ್‌ ಶಾ ಅವರು ನಾಳೆ ಬೆಳಗಾವಿ ಜಿಲ್ಲೆಯ ಅನೇಕ ಕ್ಷೇತ್ರಗಳಲ್ಲಿ ರೋಡ್‌ ಶೋ, ಪ್ರಚಾರ ಸಭೆ ಹಮ್ಮಿಕೊಂಡಿದ್ದಾರೆ. ಕೊನೆ ಗಳಿಗೆಯಲ್ಲಿ ಎಲ್ಲರೂ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಪ್ರಯತ್ನಿಸುವುದು ಸಾಮಾನ್ಯ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲ್ಲವೆಂದು ತಿಳಿದು ಪ್ರಧಾನಿ ಮೋದಿ ರಾಜ್ಯದಲ್ಲಿ ರೋಡ್‌ ಶೋ ಮಾಡುತ್ತಿದ್ದಾರೆ. ಕಾರಣ ಬಿಜೆಪಿಯವರು ಎಷ್ಟೇ ಪ್ರಚಾರ, ರೋಡ್‌ ಶೋ ನಡೆಸಿದರೂ ರಾಜ್ಯದಲ್ಲಿ ಅಧಿಕಾರಕ್ಕೆ ಬರಲ್ಲ. ಅಭಿವೃದ್ಧಿ ಪರ ರಾಜಕೀಯ ಮಾಡುವ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ, ಅಧಿಕಾರಕ್ಕೆ ತರುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್‌ ಹಣಮನ್ನವರ್‌, ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಎಂಜೆ., ಮಹೇಶ ಕಡಪಟ್ಟಿ, ರಾಮಣ್ಣ ಗುಳ್ಳಿ, ಕಿರಣ ರಜಪೂತ್‌ ಸೇರಿದಂತೆ ಅನೇಕ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಮುಖಂಡರು ಇದ್ದರು


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ