Breaking News

ಲಕ್ಷ್ಮಣ ಸವದಿಯಿಂದ ಬಿಜೆಪಿಗೆ ದ್ರೋಹ: ಅಮಿತ್ ಶಾ

Spread the love

ಅಥಣಿ: ಕಾಂಗ್ರೆಸ್ ನಾಯಕರು ಪದೇ ಪದೇ ವೀರ ಸಾವರ್ಕರ್ ಗೆ ಅಪಮಾನ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಕೂಡ ಅವಮಾನ ಮಾಡಿದ್ದಾರೆ. ನೀವು ಹತ್ತು ಜನ್ಮ ಹುಟ್ಟಿ ಬಂದರೂ ಸಾವರ್ಕರ್ ಅವರಂತಹ ಬಲಿದಾನ ನೋಡಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಅಥಣಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ನಾಯಕರು ಸಾವರ್ಕರ್ ಅವರನ್ನು ಬೆಳಗಾವಿ ಹಿಂಡಲಗಾ ಜೈಗೆ ಹಾಕಿಸಿದರು ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರು ಆಂಜನೇಯನನ್ನು ಅವಮಾನ ಮಾಡುತ್ತಿದ್ದಾರೆ. ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾದುವುದಾಗಿ ಘೋಷಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ರಾಜ್ಯದ ಜನರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಲಕ್ಷ್ಮಣ ಸವದಿ ಬಿಜೆಪಿಗೆ ದ್ರೋಹ ಮಾಡಿ ಕಾಂಗ್ರೆಸ್ ಗೆ ಹೋಗಿದ್ದಾರೆ. ಸವದಿಯವರು ಮಹದಾಯಿ ನದಿ ಯೋಜನೆಗಾಗಿ ಪದೇ ಪದೇ ನನ್ನ ಬಳಿ ಬರುತ್ತಿದ್ದರು. ಬಂದಾಗಲೆಲ್ಲ ಕಾಂಗ್ರೆಸ್ ನ್ನು ಬೈಯ್ಯುತ್ತಿದ್ದರು. ಆದರೆ ಇಂದು ಏನಾಯಿತು? ಬಿಜೆಪಿಗೆ ಮೋಸ ಮಾಡಿ ಸವದಿ ಕಾಂಗ್ರೆಸ್ ಗೆ ಸೇರಿದರು. ಕಾಂಗ್ರೆಸ್ ನಾಯಕರು ಮುಸ್ಲಿಂ ಗೆ ಮೋಸಲಾತಿ ಕೊಡುವುದಾಗಿ ಹೇಳಿದ್ದಾರೆ. ಲಿಂಗಾಯಿತ ಮೀಸಲಾತಿ ಕಿತ್ತುಕೊಂಡು ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಭರವಸೆ ಕೊಟ್ಟಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ 5 ಗ್ಯಾರಂಟಿ ಯೋಜನೆ ಘೋಷಿಸಿದೆ. ಚುನಾವಣೆಯಲ್ಲಿ ಜನರು ಗ್ಯಾರಂಟಿ ಕಾಂಗ್ರೆಸ್ ತಿರಸ್ಕರಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಟಲ್ ಕ್ಯಾಂಟಿನ್ ಆರಂಭವಾಗಲಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಅನೇಕ ಯೋಜನೆ ಜಾರಿಗೊಳಿಸಿದ್ದೇವೆ. ಬೆಳಗಾವಿ ಜಿಲ್ಲೆಯಲ್ಲಿ 25 ಕೋಟಿ ಹಣ ಹೂಡಿಕೆ ಮಾಡಲಾಗಿದೆ. ಬಿಜೆಪಿ ಸರ್ಕಾರ ಜಿಲ್ಲೆಯಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಅದಿಹಿಕಾರಕ್ಕೆ ಬಂದ ಏಲೆ ದೇಶದಲ್ಲಿ ಶಾಂತಿ ನೆಲೆಸಿದೆ ಎಂದರು.

 


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ