ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೊತ್ಸವದ ಆನೆ ಬಲರಾಮ (67) ಅನಾರೋಗ್ಯದಿಂದ ಮೃತಪಟ್ಟಿದೆ.
ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಶಿಬಿರದಲ್ಲಿ ಬಲರಾಮ ಮೃತಪಟ್ಟಿರುವುದಾಗಿ ಆನೆ ಶಿಬಿರ ಸಿಬ್ಬಂದಿಗಳು ತಿಳಿಸಿದ್ದಾರೆ.
ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇತ್ತೀಚೆಗೆ ಅನಾರೊಗ್ಯದಿಂದ ಬಳಲುತ್ತಿತ್ತು. ಬಾಯಿಯಲ್ಲಿ ಹುಣ್ಣಾಗಿದ್ದರಿಂದ ಆಹಾರ ಸೇವನೆ ನಿಲ್ಲಿಸಿತ್ತು. ಬಲರಾಮನಿಗೆ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
Laxmi News 24×7