Breaking News

ಕಾಂಗ್ರೆಸ್ ಪ್ರಚಾರ ವಾಹನ ಚಾಲಕನಿಗೆ ಹಲ್ಲೆ, ಎಸ್‍ಡಿಪಿಐ ಕಾರ್ಯಕರ್ತ ಅರೆಸ್ಟ್

Spread the love

ದಕ್ಷಿಣ ಕನ್ನಡ: ಬೈಕ್ ಮತ್ತು ಆಟೋ ರ‍್ಯಾಲಿ ನಡೆಯುತ್ತಿದ್ದಾಗ ಎಸ್​ಡಿಪಿಐ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ.

ಉಳ್ಳಾಲದ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆಯವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ಆಟೋ ರಿಕ್ಷಾ ಹಾಗೂ ಬೈಕ್ ರ‍್ಯಾಲಿಯ ಸಂದರ್ಭದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಘಟನೆ ನಡೆದಿದೆ.

ನಡೆದಿದ್ದೇನು?: ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾಗಿದ್ದಾರೆ. ನಾಟೆಕಲ್ ಸಮೀಪ ಅಸೈಗೋಳಿಯಿಂದ ಚೆಂಬುಗುಡ್ಡೆ ಸಾರ್ವಜನಿಕ ಸಭೆಗೆ ತೆರಳುತ್ತಿದ್ದ ಪ್ರಚಾರದ ವಾಹನ ಎಸ್​ಡಿಪಿಐ ರ‍್ಯಾಲಿಗೆ ನಾಟೆಕಲ್ ಸಮೀಪ ಎದುರಾಗಿತ್ತು. ಎಸ್​ಡಿಪಿಐ ಕಾರ್ಯಕರ್ತರ ಬೈಕ್ ಹಾಗೂ ರಿಕ್ಷಾ ರ‍್ಯಾಲಿಯಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಕಾಂಗ್ರೆಸ್ ಪರ ಹಾಡನ್ನು ಚುನಾವಣಾ ಪ್ರಚಾರ ವಾಹನದಲ್ಲಿ ಹಾಕಲಾಗಿತ್ತು. ಇದಕ್ಕೆ ಎಸ್‍ಡಿಪಿಐ ಕಾರ್ಯಕರ್ತರು ಆಕ್ಷೇಪಿಸಿ, ನಿಲ್ಲಿಸುವಂತೆ ಸೂಚಿಸಿದ್ದರು. ಗಣನೆಗೆ ತೆಗೆದುಕೊಳ್ಳದ ಚಾಲಕ ವಾಹನಕ್ಕೆ ಅಡ್ಡ ಇಟ್ಟವರಿಗೆ ಹಾರ್ನ್ ಹಾಕಲು ಆರಂಭಿಸಿದ್ದಾರೆ. ಇದರಿಂದ ಕೆರಳಿದ ಎಸ್‌ಡಿಪಿಐ ಕಾರ್ಯಕರ್ತರು ಚಾಲಕ ನೌಫಾಲ್ ಕಾಲರ್ ಪಟ್ಟಿ ಹಿಡಿದೆಳೆದು ಹಲ್ಲೆ ನಡೆಸಿದ್ದಾರೆ. ಐಫೋನ್ ಕಸಿದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ