ಜೈಪುರ: ಇಂಡಿಯನ್ ಏರ್ ಫೋರ್ಸ್ ನ ಮಿಗ್ 21 ಲಘು ಯುದ್ಧ ವಿಮಾನ ಪತನಗೊಂಡಿದ್ದು, ಇಬ್ಬರು ನಾಗರಿಕರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಹನುಮಾನ್ ಘರ್ ಗ್ರಾಮದ ಬಳಿ ನಡೆದಿದೆ.
ಯುದ್ಧ ವಿಮಾನ ಪತನಗೊಂಡು ವಿಮಾನದ ಅವಶೇಷಗಳು ಮನೆಯ ಮೇಲೆ ಬಿದ್ದಿದೆ. ಪರಿಣಿಮ ಮನೆಯಲ್ಲಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿಮಾನದ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
Laxmi News 24×7