Breaking News
Home / Uncategorized / ದಿ ಕೇರಳ ಸ್ಟೋರಿ’ ಚಿತ್ರ ತಂಡದ ಸದಸ್ಯನಿಗೆ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ದಿ ಕೇರಳ ಸ್ಟೋರಿ’ ಚಿತ್ರ ತಂಡದ ಸದಸ್ಯನಿಗೆ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಭದ್ರತೆ ಒದಗಿಸಿದ್ದಾರೆ.

Spread the love

 

ಮುಂಬೈ (ಮಹಾರಾಷ್ಟ್ರ): ‘ದಿ ಕೇರಳ ಸ್ಟೋರಿ’ ಚಿತ್ರ ತಂಡದ ಸಿಬ್ಬಂದಿಯೊಬ್ಬರಿಗೆ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ‘ದಿ ಕೇರಳ ಸ್ಟೋರಿ’ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಸಿಬ್ಬಂದಿಯೊಬ್ಬರು ಅಪರಿಚಿತ ಸಂಖ್ಯೆಯಿಂದ ಸಂದೇಶ ಸ್ವೀಕರಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಹಾಗಾಗಿ, ಸಿಬ್ಬಂದಿಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಲಿಖಿತ ದೂರು ಸ್ವೀಕರಿಸದ ಕಾರಣ ಎಫ್‌ಐಆರ್ ದಾಖಲಿಸಿಲ್ಲ.

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರ ಮೇ 8 ರಂದು ರಾಜ್ಯದಲ್ಲಿ “ದ್ವೇಷ ಮತ್ತು ಹಿಂಸಾಚಾರ” ದ ಘಟನೆಗಳನ್ನು ತಪ್ಪಿಸಲು ಮತ್ತು ಶಾಂತಿಯ ನಿರ್ವಹಣೆಯನ್ನು ಉಲ್ಲೇಖಿಸಿ ‘ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ನಿಷೇಧಿಸಿದೆ. ಪಶ್ಚಿಮ ಬಂಗಾಳ ಈ ಚಲನಚಿತ್ರವನ್ನು ನಿಷೇಧಿಸಿದ ಮೊದಲ ರಾಜ್ಯವಾಗಿದೆ. ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಲಾಗಿದ್ದರೂ ಸಹ ಚಿತ್ರದ ಸುತ್ತ ರಾಜಕೀಯ ಕೂಗು ಮುಂದುವರಿದಿದೆ.ನಿಷೇಧದ ಬಗ್ಗೆ ಪ್ರತಿಕ್ರಿಯಿಸಿದ ಚಿತ್ರದ ನಿರ್ಮಾಪಕ ವಿಪುಲ್ ಅಮೃತಲಾಲ್ ಶಾ, ನಿರ್ಧಾರದ ವಿರುದ್ಧ ಕಾನೂನು ಸಮರ ಮುಂದುವರಿಸುವುದಾಗಿ ಹೇಳಿದ್ದಾರೆ. “ರಾಜ್ಯ ಸರ್ಕಾರ ನಮ್ಮ ಮನವಿ ಕೇಳದಿದ್ದರೆ, ನಾವು ಕಾನೂನು ಮಾರ್ಗಗಳನ್ನು ಅನುಸರಿಸುತ್ತೇವೆ” ಎಂದು ತಿಳಿಸಿದ್ದಾರೆ. ಸುದೀಪ್ತೋ ಸೇನ್ ನಿರ್ದೇಶನದ ಮತ್ತು ವಿಪುಲ್ ಅಮೃತ್‌ಲಾಲ್ ಶಾ ನಿರ್ಮಿಸಿದ ಚಲನಚಿತ್ರಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಕೂಡ ವಿರೋಧ ವ್ಯಕ್ತಪಡಿಸಿದ್ದರು. ಇದನ್ನು ಅವರು “ಆರ್‌ಎಸ್‌ಎಸ್ ಪ್ರಚಾರ” ಎಂದು ಕರೆದಿದ್ದರು.


Spread the love

About Laxminews 24x7

Check Also

ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

Spread the love ಬೆಳಗಾವಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದ ದಿನವನ್ನು ವಿರೋಧಿಸಿ, ಕಾಂಗ್ರೆಸ್ ಕ್ಷಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ