Breaking News

ಮತದಾನಕ್ಕೆ ಬಂದಿದ್ದ ವೃದ್ಧೆ ಕುಸಿದು ಬಿದ್ದು ಸಾವು

Spread the love

ಬೆಳಗಾವಿ: ವಿಧಾನಸಭಾ ಚುನವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತದಾನ ಚುರುಕುಗೊಂಡಿದ್ದು, ಬೆಳಗಾವಿಯ ಸವದತ್ತಿಯಲ್ಲಿ ಮತದಾನಕ್ಕೆಂದು ಬಂದ ವೃದ್ಧೆಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಸವದತ್ತಿ ಯೆಲ್ಲಮ್ಮ ಕ್ಷೇತ್ರ ವ್ಯಾಪ್ತಿಯ ಯರಝರ್ವಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಪಾರವ್ವ ಸಿದ್ನಾ (70) ಮೃತ ಮಹಿಳೆ. ಮತಚಲಾಯಿಸಲು ಮತದಾರರ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಪಾರವ್ವ ಅವರು ಲೋ ಬಿಪಿಯಿಂದಾಗಿ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ