Breaking News

85 ವರ್ಷದ ಹಿರಿಯ ಮಹಿಳೆ ಮತಗಟ್ಟೆಯ ಎದುರೇ ಧರಣಿ ಕುಳಿತು ಆಕ್ರೋಶ

Spread the love

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ 85 ವರ್ಷದ ಹಿರಿಯ ಮಹಿಳೆಯೊಬ್ಬರು ಮತಗಟ್ಟೆಯ ಎದುರೇ ಧರಣಿ ಕುಳಿತು ಆಕ್ರೋಶ ಹೊರಹಾಕಿದ್ದಾರೆ.

ಮುಕ್ತುಂಬೀ ದೊಡ್ಡಮನಿ ಹೆಸರಿನ ಅಜ್ಜಿ ಮುಂಡರಗಿ ಪಟ್ಟಣದ ಮತಗಟ್ಟೆ ಸಂಖ್ಯೆ 53ರಲ್ಲಿ ತಮ್ಮ ಮೊಮ್ಮಗನ ಜೊತೆಗೆ ಮತದಾನಕ್ಕೆ ಬಂದಿದ್ದರು. ಮತಗಟ್ಟೆಯಲ್ಲಿ ಮತ ಚಲಾಯಿಸುವ ವೇಳೆ ಮೊಮ್ಮಗನೊಂದಿಗೆ ಮತಯಂತ್ರದ ಬಳಿ ಹೋಗುವ ಅಜ್ಜಿ ನಿರ್ಧಾರಕ್ಕೆ ಮತಗಟ್ಟೆ ಅಧಿಕಾರಿಗಳು ಅನುಮತಿ ನೀಡಲಿಲ್ಲ.

ಅಜ್ಜಿ ಪರಿಪರಿಯಾಗಿ ಹೇಳಿದರೂ ಕೇಳದಿದ್ದಾಗ ಅಧಿಕಾರಿಗಳೇ ಮತ ಚಲಾವಣೆಗೆ ನೆರವಿಗೆ ಬಂದಿದ್ದಾರೆ. ಆದರೆ ಮೊದಲೇ ಆಕ್ರೋಶಗೊಂಡಿದ್ದ ಅಜ್ಜಿ ತಾವು ಹೇಳಿದ ಅಭ್ಯರ್ಥಿಗೆ ಮತ ಹಾಕಿಲ್ಲ ಎಂದು ತಗಾದೆ ತೆಗೆದಿದ್ದಾರೆ.

ಇಷ್ಟಕ್ಕೇ ಬಿಡದೆ ನ್ಯಾಯ ಸಿಗುವವರೆಗೂ ವಿರಮಿಸುವುದಿಲ್ಲ ಎಂದು ಮೊಮ್ಮಗನೊಂದಿಗೆ ಮತಗಟ್ಟೆ ಎದುರೇ ಧರಣಿ ಆರಂಭಿಸಿದ್ದು ಅಧಿಕಾರಿಗಳು ಈ ಸಮಸ್ಯೆ ಬಗೆಹರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ