Breaking News
Home / ರಾಜಕೀಯ / ಹಾಕಲು ಅಮೆರಿಕದಿಂದ ಲಕ್ಷಾಂತರ ರೂ ಖರ್ಚು ಮಾಡಿ ಬಂದರು, ಆದರೆ ಆಗಿದ್ದೇ ಬೇರೆ!

ಹಾಕಲು ಅಮೆರಿಕದಿಂದ ಲಕ್ಷಾಂತರ ರೂ ಖರ್ಚು ಮಾಡಿ ಬಂದರು, ಆದರೆ ಆಗಿದ್ದೇ ಬೇರೆ!

Spread the love

ದಾವಣಗೆರೆ: ಮತದಾನಕ್ಕಾಗಿಯೇ ದೂರದ ಅಮೇರಿಕಾದಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬಂದಿದ್ದ ವ್ಯಕ್ತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣಕ್ಕೆ ಮತದಾನದಿಂದ ವಂಚಿತರಾಗಿದ್ದಾರೆ.

ಅಮೆರಿಕಾದಲ್ಲಿ ಸಾಫ್ಟ್‌ವೇರ್ ಉದ್ಯೋಗಿ ಆಗಿರುವ ರಾಘವೇಂದ್ರ ಕಮಾಲಕರ್ ಮತದಾನಕ್ಕಾಗಿಯೇ ದಾವಣಗೆರೆಗೆ ಬಂದಿದ್ದಾರೆ.

ಆದರೆ, ಅವರ ಹೆಸರೇ ಮತದಾನದ ಪಟ್ಟಿಯಲ್ಲಿ ಇರಲಿಲ್ಲ. ಹೀಗಾಗಿ ಮತದಾನ ಮಾಡಲು ಸಾಧ್ಯವಾಗಲಿಲ್ಲ.

ಜನವರಿ ತಿಂಗಳಲ್ಲಿ ನನ್ನ ಹೆಸರು ಪಟ್ಟಿಯಲ್ಲಿತ್ತು. ನನಗೆ ಮಾಹಿತಿಯೂ ಬಂದಿತ್ತು. ವಿದ್ಯಾನಗರದ ಮಾಗನೂರು ಬಸಪ್ಪ ಶಾಲೆಯಲ್ಲಿ ನಾನು ಮತ ಚಲಾಯಿಸಲು ಬಂದಾಗ ಪಟ್ಟಿಯಲ್ಲಿ ನನ್ನ ಹೆಸರೇ ಇಲ್ಲ. ಮತದಾನ ಮಾಡಲಿಕ್ಕೆ ಆಗಲೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಮತದಾನ ಮಾಡುವ ಸಲುವಾಗಿಯೇ ಅಮೇರಿಕಾದಿಂದ ಸುಮಾರು ಒಂದೂವರೆ ಲಕ್ಷ ಖರ್ಚು ಮಾಡಿಕೊಂಡು ಬಂದಿದ್ದೇನೆ ಆದರೆ ನನಗೆ ಮತದಾನ ಮಾಡಲು ಸಾಧ್ಯವಾಗಲಿಲ್ಲ. ಮತದಾನ ಪ್ರತಿಯೊಬ್ಬರ ಜವಾಬ್ದಾರಿ. ಅದನ್ನರಿತು ಮತ ಚಲಾಯಿಸಲು ಬಂದಿದ್ದೆ ಆದರೆ ಮತಹಾಕಲು‌ ಸಾಧ್ಯವಾಗಲಿಲ್ಲ ಎಂದರು


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ