Breaking News

ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ರಸ್ತೆಗೆ ಬಡಿದು, ಪುಡಿ ಪುಡಿ ಮಾಡಿ ಗ್ರಾಮಸ್ಥರ ಆಕ್ರೋಶ

Spread the love

ವಿಜಯಪುರ: ವಿಧಾನಸಭಾ ಚುನಾವಣಾ ಮತದಾನ ಒಂದೆಡೆ ಬಿರುಸುಗೊಂದಿದ್ದು, ಇನ್ನೊಂದೆಡೆ ವಿಜಯಪುರದ ಮಸಬಿನಾಳ ಗ್ರಾಮ ರಣಾಂಗಣವಾಗಿ ಮಾರ್ಪಟ್ಟಿದೆ.

ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ರಸ್ತೆಗೆ ಬಡಿದು, ಪುಡಿ ಪುಡಿ ಮಾಡಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಅಧಿಕಾರಿಗಳು ಕಾಯ್ದಿರಿಸಿದ್ದ ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ಕೊಂಡೊಯ್ಯುತ್ತಿದ್ದು. ಈ ವೇಳೆ ಮತದಾನ ಪ್ರಕ್ರಿಯೆಯನ್ನು ಅಧಿಕಾರಿಗಳು ಅರ್ಧಕ್ಕೆ ಸ್ಥಗಿತಗೊಳುಸುತ್ತಿದ್ದಾರೆ ಎಂದು ಗ್ರಾಮಸ್ಥರು ತಪ್ಪಾಗಿ ಭಾವಿಸಿ ಅಧಿಕಾರಿಗಳ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಜಯಪುರದ ಮಸಬಿನಾಳದಲ್ಲಿ ಮತಯಂತ್ರ ಪುಡಿ ಪುಡಿ; ಕೋಲಾರದಲ್ಲಿ ಪಿಎಸ್​ಐ ಜೀಪ್‌ಗೆ ಮುತ್ತಿಗೆ

ಅಧಿಕಾರಿಗಳ ವಾಹನವನ್ನು ಅಡ್ಡಗಟ್ಟಿ ವಾಹನವನ್ನು ಕೆಡವಿ ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ಕಸಿದು ಅವುಗಳನ್ನು ಒಡೆದುಹಾಕಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ