Breaking News

ಮತಗಟ್ಟೆಗೆ ಬಿಜೆಪಿ ಕಾರ್ಯಕರ್ತರು ಕೇಸರಿಶಾಲು ಧರಿಸಿ ಬಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅಕ್ರೋಶ

Spread the love

ಖಾನಾಪುರ: ಬೆಳಿಗ್ಗೆಯಿಂದ ಶಾಂತಿಯುತವಾಗಿ ನಡೆಯುತ್ತಿದ್ದ ಮತದಾನ ಮಧ್ಯಾಹ್ನವಾಗುತ್ತಿದ್ದಂತೆ ಕೆಲ ಮತಗಟ್ಟೆಗಳ ಬಳಿ ಬಿಗುವಿನ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ.

ಮತಗಟ್ಟೆಗೆ ಬಿಜೆಪಿ ಕಾರ್ಯಕರ್ತರು ಕೇಸರಿಶಾಲು ಧರಿಸಿ ಬಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ದೇವಲತ್ತಿ ಗ್ರಾಮದಲ್ಲಿ ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ಕೇಸರು ಶಾಲು ಧರಿಸಿ ಬಂದಿರುವುದಲ್ಲದೇ, ಕೇಸರಿ ಶಾಲು ಬೀಸಿ ಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ. ಮತಗಟ್ಟೆಯ ಬಳಿ ಈರೀತಿ ಪ್ರಚಾರ ಮಾಡುವುದು ಸರಿಯಲ್ಲ ಎಂದು ಶಾಸಕಿ ಅಂಜಲಿ ನಿಂಬಾಳ್ಕರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಶಾಸಕಿ ಅಂಜಲಿ ನಿಂಬಾಳ್ಕರ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದ ಘಟನೆ ನಡೆದಿದೆ. ನನ್ನನ್ನು ಬೆದರಿಸಲು ಬಿಜೆಪಿ ಕಾರ್ಯಕರ್ತರು ಈ ರೀತಿ ಮಾಡಿದ್ದಾರೆ. ಇದಕ್ಕೆಲ್ಲ ನಾನು ಹೆದರುವವಳಲ್ಲ ಎಂದು ಅಂಜಲಿ ನಿಂಬಾಳಕರ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಸ್ಥಳದಲ್ಲೇ ತಿರುಗೇಟನ್ನೂ ಅವರು ನೀಡಿದರು.


Spread the love

About Laxminews 24x7

Check Also

ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!

Spread the loveಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ