Breaking News

ಗಾಲಿ ಜನಾರ್ದನ ರೆಡ್ಡಿ ವಿರುದ್ಧ FIR ದಾಖಲ

Spread the love

ಕೊಪ್ಪಳ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ FIR ದಾಖಲಿಸಲಾಗಿದೆ.

ರಾಜ್ಯ ವಿಧಾನಸಭೆಗೆ ಬುಧವಾರ ನಡೆದ ಚುನಾವಣೆಯ ಮತದಾನದ ವೇಳೆ ಜನಾರ್ದನ ರೆಡ್ಡಿಯವರು ಮತಗಟ್ಟೆ ಬಳಿ ಪ್ರಚಾರ ಮಾಡಿದ್ದಾರೆ ಎಂಬ ಕಾರಣಕ್ಕೆ ಅವರ ವಿರುದ್ಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗಂಗಾವತಿ ಕ್ಷೇತ್ರದ ಲಕ್ಷ್ಮೀ ಕ್ಯಾಂಪ್ ನ ನಿಷೇಧಿತ ಪ್ರದೇಶದಲ್ಲಿ ಜನಾರ್ದನ ರೆಡ್ಡಿ ಅವರು ನೀತಿ ಸಂಹಿತೆ ಉಲ್ಲಂಘಿಸಿ ತಮ್ಮ ಪಕ್ಷದ ಪರ ಪ್ರಚಾರ ಕೈಗೊಂಡಿದ್ದಾರೆ ಎಂದು ಆರೋಪಿಸಿ ಕ್ಷೇತ್ರದ ಚುನಾವಣಾಧಿಕಾರಿ ಸನಿತ್ ಸಿ. ಅವರು ಜನಾರ್ದನ ರೆಡ್ಡಿ ಅವರ ವಿರುದ್ಧ ದೂರು ದಾಖಲಿಸಿದ್ದು ಈ ಸಂಬಂಧ ಒಂದು ವಾಹನವನ್ನು ಸಹ ಜಪ್ತಿ ಮಾಡಿದ್ದಾರೆ


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ