Breaking News

ಬಾವಮೈದುನನ್ನು ಕೊಲೆಗೈದ ಬಾವ.!

Spread the love

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ಕ್ಷುಲ್ಲಕ ವಿಚಾರವಾಗಿ ಬಾವ-ಬಾವಮೈದುನರ ನಡುವಿನ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.

 

 

ಮೃತರು ಜಮಾಲ್ ಎಂದು ತಿಳಿದುಬಂದಿದೆ. ಮೃತರ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಆರೋಪಿಯಾಗಿದ್ದಾನೆ. ಸದ್ಯ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇವರಿಬ್ಬರ ಮನೆಗಳು ಅಕ್ಕಪಕ್ಕದಲ್ಲಿದ್ದು ಸಣ್ಣ ಮಕ್ಕಳೊಳಗಿನ ವೈಮನಸ್ಸಿನ ವಿಚಾರವಾಗಿ ಇಂದು ಬೆಳಗ್ಗೆ ಜಮಾಲ್ ಮತ್ತು ಸುಹೈಬ್ ನಡುವೆ ಮಾತಿಕ ಚಕಮಕಿ ನಡೆದಿದೆ.

 

 

ಗಲಾಟೆ ವಿಕೋಪಕ್ಕೆ ತಿರುಗಿ ಜಮಾಲ್ ಹೊಟ್ಟೆಗೆ ಆರೋಪಿ ಸುಹೈಬ್ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುಹೈಬ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

 

 

ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ