Breaking News

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಮಾಸುವ  ಮುನ್ನವೇ    ಇದೀಗ ಅಂತಹುದೇ  ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ  15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

Spread the love

ಉತ್ತರ ಪ್ರದೇಶ:  ದೇಶವನ್ನೇ ಬೆಚ್ಚಿ ಬೀಳಿಸಿದ್ದ  ಉತ್ತರಪ್ರದೇಶದ ಹತ್ರಾಸ್ ನಲ್ಲಿ ಗ್ಯಾಂಗ್ ರೇಪ್ ಪ್ರಕರಣ ಮಾಸುವ  ಮುನ್ನವೇ    ಇದೀಗ ಅಂತಹುದೇ  ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ  ಸಂಭವಿಸಿದೆ.

15 ವರ್ಷದ ಬಾಲಕಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಉತ್ತರಪ್ರದೇಶದ ರಾಂಪುರ ಜಿಲ್ಲೆಯ ಕೆಮ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಭೀಕರ ಘಟನೆ ನಡೆದಿದ್ದು, ಬಾಲಕಿಯ ಮನೆಯಲ್ಲಿಯೇ ಮನೆ ನಿರ್ಮಾಣದ ಕೆಲಸ ಮಾಡುತ್ತಿದ್ದ ಇಬ್ಬರು ಕಟ್ಟಡ ಕಾರ್ಮಿಕರು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅತ್ಯಾಚಾರಕ್ಕೊಳಗಾದ 15 ವರ್ಷದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ಆಕೆಯ ತಾಯಿ ತಂದೆ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ಈ ಭಟ್‌ಪುರ ತರಣ್ ನಿವಾಸಿಗಳಾದ ರಿಝ್ವಾನ್ ಮತ್ತು ಆಲಂ ಬಾಲಕಿಯನ್ನು ಅಪಹರಿಸಿ ಹತ್ತಿರದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ.

ಸದ್ಯ ಇಬ್ಬರು ಕಾಮುಕರನ್ನು ಬಂಧಿಸಲಾಗಿದ್ದು, ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಅಧಿಕಾರಿಯ ಪ್ರತಿ ವರ್ಗಾವಣೆಗೂ ಗೆಜೆಟ್ ಅಧಿಸೂಚನೆ ಹೊರಡಿಸುವ ಅಗತ್ಯ ಇಲ್ಲ: ಹೈಕೋರ್ಟ್

Spread the loveಬೆಂಗಳೂರು: ರಾಜ್ಯದ ಒಂದು ವೃತ್ತದಲ್ಲಿ ಸೇವೆ ಸಲ್ಲಿಸುವ ಅಧಿಕಾರಿಗೆ ಡ್ರಗ್ಸ್ ಇನ್ಸ್​ಪೆಕ್ಟರ್ ಎಂಬುದಾಗಿ ಗೆಜೆಟ್‌ ಅಧಿಸೂಚನೆ ಹೊರಡಿಸಿದ ಬಳಿಕ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ