Breaking News

ಮೋದಿ-ಜೋಶಿ ರಾಜಕೀಯ ನಿವೃತ್ತಿ ಪಡೆಯುತ್ತಾರಾ?: ಶೆಟ್ಟರ್‌

Spread the love

ಹುಬ್ಬಳ್ಳಿ: ನನಗೆ ರಾಜಕೀಯ ನಿವೃತ್ತಿಗೆ ಬಿಜೆಪಿ ನಾಯಕರು ಹೇಳುತ್ತಾರೆ. ನಾಲ್ಕು ಬಾರಿ ಮುಖ್ಯಮಂತ್ರಿ, ಎರಡು ಬಾರಿ ಪ್ರಧಾನಿ ಆಗಿರುವ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಬಿಡುತ್ತಾರೆಯೇ? ನಾಲ್ಕು ಬಾರಿ ಸಂಸದರಾಗಿರುವ, ಕೇಂದ್ರದಲ್ಲಿ ಸಚಿವರಾಗಿರುವ ಪ್ರಹ್ಲಾದ ಜೋಶಿ ರಾಜಕೀಯ ಬಿಡುತ್ತಾರೆಯೇ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಪ್ರಶ್ನಿಸಿದರು.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿಯವರೆಗೆ ಜನರ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೆ ರಾಜಕೀಯದಲ್ಲಿ ಎಲ್ಲರೂ ಇರಬೇಕಾಗುತ್ತದೆ. ಏಣಿ ಹತ್ತಿ ನಿಚ್ಚಣಿಕೆ ತೆಗೆದು ಹಾಕಿದರು ಅಂತಾರಲ್ಲ ಅದೇ ರೀತಿ ಜೋಶಿಯವರದ್ದು. ನನ್ನ ಹಿರಿತನದ ಮೇಲೆ ಸಚಿವ ಸ್ಥಾನ ದೊರೆತಿದೆ. ಜೋಶಿಯವರು ಇತ್ತೀಚೆಗೆ ಸುಳ್ಳು ಹೇಳುವುದನ್ನು ಕಲಿತಂತಿದೆ. ನಾನು ಬಿ.ಎಲ್‌. ಸಂತೋಷ, ಪ್ರಹ್ಲಾದ ಜೋಶಿ ಅವರನ್ನು ಟೀಕಿಸಿದ್ದೇನೆ ವಿನಾ ಇಡೀ ಬ್ರಾಹ್ಮಣ ಸಮಾಜವನ್ನಲ್ಲ. ಮೀಸಲಾತಿ ವಿಚಾರದಲ್ಲಿ ರಾಜ್ಯ ಸರಕಾರ ಜನತೆಗೊಂದು, ಸುಪ್ರೀಂ ಕೋರ್ಟ್‌ ಮುಂದೆ ಒಂದು ಹೇಳಿಕೆ ನೀಡಿ ಜನರಿಗೆ ಮೋಸ ಮಾಡಿದೆ ಎಂದರು


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ