Breaking News
Home / ರಾಜಕೀಯ / ಗರಿಗೆದರಿದ ರಾಜಕೀಯ: ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸರಣಿ ಸಭೆ

ಗರಿಗೆದರಿದ ರಾಜಕೀಯ: ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸರಣಿ ಸಭೆ

Spread the love

ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್ ನಾಯಕರು ಸರಣಿ ಸಭೆ ನಡೆಸಿದ್ದಾರೆ.

ಪಕ್ಷಕ್ಕೆ ಬಹುಮತ ಬಂದರೆ ಸರ್ಕಾರ ರಚನೆ ವಿಚಾರ ನಿಟ್ಟಿನಲ್ಲಿ ಹಾಗೂ ಅಭ್ಯರ್ಥಿಗಳನ್ನು ಹಿಡಿದಿಟ್ಟುಕೊಳ್ಳುವ ತಂತ್ರಗಾರಿಕೆ ನಿಟ್ಟಿನಲ್ಲಿ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ರಾಜ್ಯ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ.

ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸದಾಶಿವನಗರದ ಖರ್ಗೆ ನಿವಾಸಕ್ಕೆ ತೆರಳಿದ್ದು, ಮಹತ್ವದ ಸಭೆ ನಡೆಸಿದ್ದಾರೆ.

ಒಂದೊಮ್ಮೆ ಅತಂತ್ರ ಫಲಿತಾಂಶ ಬಂದರೂ ತಕ್ಷಣ ಕೈಗೊಲ್ಳಬೇಕಿರುವ ರಣತಂತ್ರದ ಬಗ್ಗೆಯೂ ಮೀಟಿಂಗ್ ನಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ