Breaking News

ಬಿಜೆಪಿ ಆಪರೇಷನ್ ಕಮಲ ಮಾಡುವುದು ಹಗಲು ಕನಸು: ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ಈ ಬಾರಿ ಬಿಜೆಪಿ ಆಪರೇಷನ್ ಕಮಲ ಮಾಡುವುದು ಹಗಲು ಕನಸು. ಪ್ರತಿಬಾರಿ ಆಪರೆಶನ್ ಕಮಲ ಸಕ್ಸಸ್ ಆಗಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ನಮ್ಮ ಲೆಕ್ಕದ ಪ್ರಕಾರ ನಮಗೆ ಬಹುಮತದ ಕೊರತೆಯಾಗಲ್ಲ. ಯಾರು ಏನೆ ಮಾಡಿದ್ರೂ ರಾಜ್ಯದ ಜನ ಕಾಂಗ್ರೆಸ್ ಪರ ಇದ್ದಾರೆ ಎಂದರು.

ಮೈತ್ರಿಗೆ ಸಿದ್ಧವಿರುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಗೆ ಬಹುಮತದ ಕೊರತೆ ಆಗಲ್ಲ, ಆದರೂ ಅವರು ಬೆಂಬಲಿಸಿದರೆ ಇನ್ನೂ ಒಳ್ಳೆಯ ಸರ್ಕಾರ ನೀಡುತ್ತೇವೆ. ದೇವೇಗೌಡರ ಹಾಗೂ ಕುಮಾರಸ್ವಾಮಿಯವರ ಸಲಹೆ ಇದ್ದರೆ ಒಳ್ಳೆಯದೇ. ಒಂದು ವೇಳೆ ಸರ್ಕಾರ ರಚನೆಯಲ್ಲಿ ಜೆಡಿಎಸ್ ಪಾತ್ರ ನಿರ್ಣಯ ಆಗಬಹುದು ಹೊರತು ಬಿಜೆಪಿಯದ್ದಲ್ಲ ಎಂದರು.

ಈ ಬಾರಿ ಆಪರೇಷನ್ ಕಮಲ ಅನ್ನುವುದು ಹಗಲು ಕನಸು. ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಅತಂತ್ರ ಫಲಿತಾಂಶ ಬರುವುದಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಬೆಂಗಳೂರಲ್ಲಿ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ಇಲ್ಲಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ