Breaking News

ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂDK.ಶಿವಕುಮಾರ್ ನಡುವೆ ನೇರ ಪೈಪೋಟಿ

Spread the love

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತ ಸಿಕ್ಕಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಸಿದ್ಧತೆಗಳು ನಡೆದಿವೆ. ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಂಜೆ 5:30ಕ್ಕೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯಾಗಲಿದ್ದಾರೆ. ಸಭೆಯಲ್ಲಿ ಸಿಎಂ ಆಯ್ಕೆಯಾಗಲಿದೆ ಎಂದು ಈಗಾಗಲೇ ಹೈಕಮಾಂಡ್ ತಿಳಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಉತರ ಕರ್ನಾಟಕ ಭಾಗದ ಶಾಸಕರ ವಿಶ್ವಾಸ ಗಳಿಸಲು ಕಸರತ್ತು ನಡೆಸಿದ್ದಾರೆ. ಇನ್ನು ಹಳೇ ಮೈಸೂರು, ಮಧ್ಯ ಕರ್ನಾಟಕ ಭಾಗದ ಶಾಸಕರು ತಮಗೆ ಬೆಂಬಲ ನೀಡಲಿದ್ದಾರೆ ಎಂಬ ವಿಶ್ವಾಸದಲ್ಲಿ ಡಿ.ಕೆ.ಶಿವಕುಮಾರ್ ಇದ್ದಾರೆ.

ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ದಿ.ಕೆ.ಶಿವಕುಮಾರ್ ನಡುವೆ ನೇರ ಪೈಪೋಟಿ ನಡೆದಿದೆ. ಒಂದೆಡೆ ಸಿದ್ದರಾಮಯ್ಯ ರಹಸ್ಯ ಸಭೆ ನದೆಸಿ ತಂತ್ರಗಾರಿಕೆ ನಡೆಸಿದ್ದಾರೆ. ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂಬ ನಿಟ್ಟಿನಲ್ಲಿ ಒಕ್ಕಲಿಗ ಮಠಾಧೀಶರು ಸಭೆ ನಡೆಸಿದ್ದಾರೆ. ಮತ್ತೊಂದೆಡೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕು ಎಂದು ಅವರ ಬೆಂಬಲಿಗರು ಬೇಡಿಕೆ ಇಟ್ಟಿದ್ದಾರೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ