Breaking News
Home / ರಾಜಕೀಯ / ಇದುಮೋದಿ ಸೋಲಲ್ಲ, ಕಾಂಗ್ರೆಸ್ ನಾಯಕತ್ವ ದೇಶದಲ್ಲೇ ಸೋತಿದೆ: ಬೊಮ್ಮಾಯಿ

ಇದುಮೋದಿ ಸೋಲಲ್ಲ, ಕಾಂಗ್ರೆಸ್ ನಾಯಕತ್ವ ದೇಶದಲ್ಲೇ ಸೋತಿದೆ: ಬೊಮ್ಮಾಯಿ

Spread the love

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ದಯನೀಯ ಸೋಲಿನ ಕುರಿತು ರಾಷ್ಟ್ರೀಯ ನಾಯಕರು ವರದಿ ಕೇಳಿದ್ದರು.

ಈಗ ಇರುವ ಮಾಹಿತಿಯನ್ನು ಕಳುಹಿಸಿ ಕೊಡಲಾಗಿದೆ. ಸದ್ಯದಲ್ಲೇ ಸೋಲಿನ ಕುರಿತು ಆತ್ಮಾವಲೋಕನ ಸಭೆ ನಡೆಸಿ ತಪ್ಪು ತಿದ್ದುಕೊಳ್ಳುವ ಕೆಲಸ ಮಾಡುತ್ತೇವೆ ಎಂದು ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,‌ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸೋಲು, ಗೆಲುವಿನ ಬಗ್ಗೆ ಪರಾಮರ್ಶೆ ಸಭೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಕಳಪೆ ಸಾಧನೆ ಮಾಡಿದ ಕುರಿತು ಪ್ರಾಥಮಿಕ ಮಾಹಿತಿಗಳ ಆಧಾರದಲ್ಲಿ ಚರ್ಚಿಸಲಾಯಿತು. 66 ಸ್ಥಾನ ಮಾತ್ರ ಬಿಜೆಪಿ ಗೆದ್ದಿದ್ದು, ಇಡೀ ರಾಜಕೀಯ ಬೆಳವಣಿಗೆ ಬಗ್ಗೆ ಆತ್ಮಾವಲೋಕನ ಮಾಡುವ ಕುರಿತು ಸಮಾಲೋಚನೆ ನಡೆದಿದೆ.

ಸಭೆಯಲ್ಲಿ ಮಾಜಿ ಸಚಿವರಾದ ಅಶ್ವತ್ಥನಾರಾಯಣ, ಮುನಿರತ್ನ, ಬೈರತಿ ಬಸವರಾಜ್. ಶಾಸಕರಾದ ರವಿ ಸುಬ್ರಹ್ಮಣ್ಯ, ಸಿ.ಕೆ ರಾಮಮೂರ್ತಿ ಸಭೆಯಲ್ಲಿ ಭಾಗಿಯಾಗಿದ್ದು ಚರ್ಚೆಯಲ್ಲಿ ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಅಂತಿಮವಾಗಿ ವಿಧಾನಸಭಾ ಚುನಾವಣಾ ಸೋಲು ಹಿನ್ನೆಲೆ ಸೋಲಿನ ಒಟ್ಟಾರೆ ಅವಲೋಕನ ಮಾಡಬೇಕು ಮತ್ತು ಕ್ಷೇತ್ರವಾರು ಸೋಲಿನ ವಿಮರ್ಶೆ ಮಾಡಲು ತೀರ್ಮಾನಿಸಲಾಗಿದೆ.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಪ್ರಮುಖರು ಸೇರಿದ್ದೆವು. ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಚರ್ಚೆ ಮಾಡಿದ್ದೇವೆ. ರಿಸಲ್ಟ್ ಬಗ್ಗೆ, ಬೇರೆ ಬೇರೆ ಕಡೆಯಿಂದ ಮಾಹಿತಿ ಕಲೆ ಹಾಕಿದ್ದೇವೆ. ಇಂದಿನ ಸಭೆಯಲ್ಲಿ ಎರಡು ತೀರ್ಮಾನ ಕೈಗೊಳ್ಳಲಾಗಿದೆ. ಒಂದು ಕಡ್ಡಾಯವಾಗಿ ಫಲಿತಾಂಶದ ಬಗ್ಗೆ ವಿಶ್ಲೇಷಣೆ ಮಾಡುತ್ತೇವೆ. ಕ್ಷೇತ್ರವಾರು ನಮ್ಮ ಮತಗಳಿಕೆ ಪ್ರಮಾಣ ಹಿಂದಿನ ರೀತಿಯೇ ಇದ್ದರೂ ನಮಗೆ ಸ್ಥಾನಗಳು ಕಡಿಮೆ ಬಂದಿವೆ. ಈ ಬಗ್ಗೆ ಅವಲೋಕನ ಮಾಡಬೇಕು ಎನ್ನುವ ನಿರ್ಧಾರ ಮಾಡಲಾಗಿದೆ. ಎರಡನೆಯದಾಗಿ ಅಧ್ಯಕ್ಷರು ಮೂರ್ನಾಲ್ಕು ದಿನದಲ್ಲಿ ಸಭೆ ಕರೆಯಬೇಕು ಅಲ್ಲಿ ಎಲ್ಲಾ ಚರ್ಚೆ ಮಾಡಬೇಕು ಎಂದು ನಿರ್ಧರಿಸಲಾಗಿದೆ ಎಂದರು.

ಮುಂದೆ ಪಕ್ಷ ಸಂಘಟನೆ, ನಾಯಕರ ಆಯ್ಕೆ ಮಾಡುವುದು, ಆಡಳಿತ ವಿರೋಧಿ ಅಲೆ ಇದ್ದ ಬಗ್ಗೆ ಸರಿಯಾದ ಮಾಹಿತಿ ಪಡೆಯದಿರುವುದು ಸೇರಿದಂತೆ ಹಲವು ವಿಷಯಗಳ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ನಮ್ಮ ಪಕ್ಷ ಸಂಘಟನೆಗೆ ವಿಶ್ರಾಂತಿ ಇಲ್ಲ. ಚುನಾವಣೆ ಬಂದಾಗ ಮಾತ್ರವಲ್ಲದೆ, ಚುನಾವಣೆ ನಂತರವೂ ಪಕ್ಷ ಸಂಘಟನೆ ಮಾಡಿದ್ದೇವೆ. ಪಕ್ಷ ಪುನರ್ ಸ್ಥಾಪನೆ ಮಾಡುವುದು ನಮ್ಮ ಗುರಿ. 2013ರಲ್ಲಿ 40 ಸೀಟ್ ಬಂದಿತ್ತು. ಈಗ ಅದಕ್ಕಿಂತ ಹೆಚ್ಚು ಸೀಟ್ ಗೆದ್ದಿದ್ದೇವೆ. ಸೋಲನ್ನು ಅತ್ಯಂತ ವಿನಯವಾಗಿ ಸ್ವೀಕರಿಸಿದ್ದೇವೆ ಎಂದು ಹೇಳಿದರು.

ಕ್ಷೇತ್ರಗಳಲ್ಲಿನ ಆಡಳಿತ ವಿರೋಧಿ ಅಲೆ ಕುರಿತು ಚರ್ಚೆಯಾಗಿದೆ. ಇಂದಿನ ಸಭೆಯಲ್ಲಿ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ವಿಚಾರದ ಕುರಿತು ಯಾವುದೇ ಚರ್ಚೆಯಾಗಿಲ್ಲ, ಸೋಲನ್ನು ನಾವೆಲ್ಲ ಸ್ವೀಕಾರ ಮಾಡಿದ್ದೇವೆ. ನಾನೂ ಸೋಲಿನ ಹೊಣೆ ಹೊತ್ತಿದ್ದೇನೆ. ಕಟೀಲ್ ಕೂಡ ಸೋಲಿನ ಜವಾಬ್ದಾರಿ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಎಲ್ಲರೂ ಆತ್ಮಾವಲೋಕನ ಮಾಡಿ ಕಾರಣ ಹುಡುಕುತ್ತೇವೆ ಎಂದರು.

ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಇರುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಹಂಗಾಮಿ ಸಿಎಂ, ಕಾದು ನೋಡೋಣ, ಯಾರು ಸಿಎಂ‌ ಆಗ್ತಾರೆ ಅಂತ. ಇಬ್ಬರಿಗೂ ಆಲ್ ದಿ ಬೆಸ್ಟ್ ಹೇಳ್ತೀನಿ. ಪ್ರತಿಪಕ್ಷ ನಾಯಕನ ಆಯ್ಕೆ ಕುರಿತು ನಮ್ಮಲ್ಲಿ ಇನ್ನು ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯ ಭರವಸೆಗಳ ಜಾರಿ ಮಾಡುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಮೊದಲು ಕಾಂಗ್ರೆಸ್​ನವ್ರು ಸರ್ಕಾರ ಮಾಡಲಿ, ಆ ನಂತರ ಕ್ಯಾಬಿನೆಟ್ ಕರೆದು ಏನು ಮಾಡ್ತಾರೆ ಎಂದು ನೋಡೋಣ ಎಂದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ