Breaking News
Home / ಜಿಲ್ಲೆ / ಬೆಂಗಳೂರು / ಮುತ್ತಪ್ಪ ರೈ ಸಾವಿನ ಬೆನ್ನಲ್ಲೇ ಶುರುವಾದ ಆಸ್ತಿ ವಿವಾದ – ಕೋರ್ಟ್ ಮೆಟ್ಟಿಲೇರಿದ ಪತ್ನಿ

ಮುತ್ತಪ್ಪ ರೈ ಸಾವಿನ ಬೆನ್ನಲ್ಲೇ ಶುರುವಾದ ಆಸ್ತಿ ವಿವಾದ – ಕೋರ್ಟ್ ಮೆಟ್ಟಿಲೇರಿದ ಪತ್ನಿ

Spread the love

ಬೆಂಗಳೂರು: ಮುತ್ತಪ್ಪ ರೈ ಸಾವಿನ ನಂತರ ಅವರ ಕುಟುಂಬದಲ್ಲಿ ಆಸ್ತಿ ವಿವಾದ ಶುರುವಾಗಿದ್ದು, ರೈ ಎರಡನೇ ಪತ್ನಿ ಆಸ್ತಿಯಲ್ಲಿ ಪಾಲು ಕೇಳಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಮುತ್ತಪ್ಪ ರೈ ಅವರು ಸಾಯುವ ಮುನ್ನವೇ ತನ್ನ ಆಸ್ತಿಯ ಬಗ್ಗೆ ವಿಲ್ ಬರೆದು ಇಟ್ಟಿದ್ದರು. ಇದರಲ್ಲಿ ಅವರ ಆಸ್ತಿ ಯಾರಿಗೇ ಸೇರಬೇಕು ಮತ್ತು ಎಷ್ಟು ಸೇರಬೇಕು ಎಂದು ತಿಳಿಸಿದ್ದರು. ಹೀಗಿದ್ದರೂ ಅವರ ಸಾವಿನ ಬಳಿಕ ಅವರ ಎರಡನೇ ಪತ್ನಿ ಅನುರಾಧ ಪಾಲು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಈಗಾಗಲೇ ಅನುರಾಧ ಅವರಿಗೂ ಆಸ್ತಿಯಲ್ಲಿ ಪಾಲು ನೀಡಲಾಗಿದೆ ಎಂದು ರೈ ವಿಲ್‍ನಲ್ಲಿ ತಿಳಿಸಿದ್ದರು. ಆದರೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟಿನಲ್ಲಿ ಅನುರಾಧ ಮುತ್ತಪ್ಪ ರೈ ಅವರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಮುತ್ತಪ್ಪ ರೈ ಪುತ್ರರಾದ ರಾಕಿ, ರಿಕ್ಕಿ ಸೇರಿ 17 ಪ್ರತಿವಾದಿಗಳಿಗೆ ಕೋರ್ಟ್ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 4ಕ್ಕೆ ಮುಂದಿನ ವಿಚಾರಣೆ ನಡೆಸುವುದಾಗಿ ಕೋರ್ಟ್ ಸಮಯವನ್ನು ನಿಗದಿ ಮಾಡಿದೆ.

ಈಗಾಗಲೇ ಎರಡನೇ ಪತ್ನಿ ಅನುರಾಧಾಗೆ ಆಸ್ತಿ ಹಂಚಿಕೆ ಮಾಡಿರುವುದಾಗಿ ಮುತ್ತಪ್ಪ ರೈ ವಿಲ್‍ನಲ್ಲಿ ತಿಳಿಸಿದ್ದರು. ಚಿನ್ನಾಭರಣ, ಕಾರು, ಕೋಟ್ಯಂತರ ರೂಪಾಯಿ ಹಣದ ಜೊತೆ ಹೆಚ್ ಡಿ ಕೋಟೆ ಆಸ್ತಿ, ಜೊತೆಗೆ ಸಹಕಾರ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಿಸಿ ಕೊಡಲಾಗಿದೆ. ಅನುರಾಧಾ ಜೊತೆಗಿದ್ದ ಸಂದರ್ಭದಲ್ಲಿ ಅವರಿಗೆ ಸೇರಬೇಕಾದ ಆಸ್ತಿಯನ್ನು ನೀಡಲಾಗಿದೆ ಎಂದು ವಿಲ್‍ನಲ್ಲಿ ಉಲ್ಲೇಖವಾಗಿದೆ.

ಆಸ್ತಿ ಎಷ್ಟಿದೆ?
ವಿಲ್ ಪ್ರಕಾರ ಸುಮಾರು 2 ಸಾವಿರ ಕೋಟಿಗೂ ಅಧಿಕ ಆಸ್ತಿ ರೈ ಹೆಸರಿನಲ್ಲಿದೆ. ದೇವನಹಳ್ಳಿ, ಯಲಹಂಕ, ಬಿಡದಿಯಲ್ಲಿ 150ಕ್ಕೂ ಅಧಿಕ ಎಕರೆ ಜಾಗ, ಮೈಸೂರು, ಮಂಗಳೂರು, ಬಂಟ್ವಾಳ, ಪುತ್ತೂರಿನಲ್ಲಿ ನೂರಾರು ಎಕರೆ ಜಮೀನು ಮುತ್ತಪ್ಪ ರೈ ಹೆಸರಿನಲ್ಲಿದೆ. ಸಕಲೇಶಪುರದಲ್ಲಿ 200 ಎಕರೆ ಜಮೀನಿದೆ.

ಹಂಚಿಕೆ ಹೇಗೆ?
ಒಟ್ಟು 600ಕ್ಕೂ ಅಧಿಕ ಎಕರೆ ಜಮೀನನ್ನು ತನ್ನಿಬ್ಬರು ಮಕ್ಕಳಾದ ರಿಕ್ಕಿ ಹಾಗೂ ರಾಖಿ ರೈಗೆ ಗಿಫ್ಟ್ ಡೀಡ್ ಮಾಡಿದ್ದಾರೆ. ಆಸ್ತಿಗಳ ಪೈಕಿ ಮೈಸೂರು, ಪುತ್ತೂರು, ಬಂಟ್ವಾಳ, ಮಂಗಳೂರು ಜಾಗವನ್ನು ರಾಖಿ ರೈಗೆ ನೀಡಿದ್ದರೆ, ಸಕಲೇಶಪುರ, ಬಿಡದಿ, ಯಲಹಂಕ ಹಾಗೂ ದೇವನಹಳ್ಳಿ ಜಾಗವನ್ನು ಚಿಕ್ಕ ಮಗ ರಿಕ್ಕಿ ರೈಗೆ ಹಂಚಿಕೆ ಮಾಡಿದ್ದಾರೆ. ಆಪ್ತರು, ಸಂಬಂಧಿಕರಿಗೆ ಶೇ.20 ರಷ್ಟು ಆಸ್ತಿ ನೀಡಬೇಕೆಂದು ಸೂಚಿಸಿದ್ದಾರೆ. ಬಿಡದಿ ಹಾಗೂ ಸದಾಶಿವನಗರದ ಎರಡೂ ಮನೆಗಳ ಜವಾಬ್ದಾರಿಯನ್ನು ಚಿಕ್ಕ ಮಗ ರಿಕ್ಕಿ ರೈಗೆ ನೀಡಿದ್ದು ಟ್ರೇಡಿಂಗ್ ವ್ಯವಹಾರ ಕಂಪನಿಯನ್ನು ದೊಡ್ಡ ಮಗ ರಾಖಿ ನೋಡಿಕೊಳ್ಳುವಂತೆ ಸೂಚಿಸಿದ್ದರು.

ಕೆಲಸಗಾರರಿಗೆ ಸೈಟ್:
ನಂಬಿಕೆಯಿಂದ 15 ವರ್ಷಗಳ ಕಾಲ ತನ್ನ ಬಳಿ ಕೆಲಸ ಮಾಡಿದ 25 ಕೆಲಸಗಾರರಿಗೆ ಒಂದೊಂದು ಸೈಟ್ ಹಾಗೂ ಕೈಲಾದಷ್ಟು ಹಣ ನೀಡುವಂತೆ ಕಿರಿಯ ಮಗ ರಿಕ್ಕಿ ರೈಗೆ ಸೂಚಿಸಿದ್ದರು. ತಂದೆಯ ಸೂಚನೆಯಂತೆ ರಿಕ್ಕಿ ಈಗಾಗಲೇ ತಲಾ ಒಬ್ಬೊಬ್ಬರಿಗೆ 3 ಲಕ್ಷ ರೂಪಾಯಿಗಳನ್ನು ಹಂಚಿಕೆ ಮಾಡಿದ್ದರು.

ಸಂಘಟನೆ ಹೊಣೆ ಯಾರಿಗೆ?
ಜಯ ಕರ್ನಾಟಕ ಸಂಘಟನೆ ಯಾವುದೇ ಕಾರಣಕ್ಕೂ ಒಡೆಯಬಾರದು ಎಂದು ಹೇಳಿರುವ ಮುತ್ತಪ್ಪ ರೈ ಈ ಸಂಘಟನೆಯ ಜವಾಬ್ದಾರಿಯನ್ನು ಚಿಕ್ಕಮಗ ರಿಕ್ಕಿ ರೈಗೆ ನೀಡಿದ್ದಾರೆ. ಜಗದೀಶ್ ಸಂಘಟನೆಯ ಅಧ್ಯಕ್ಷತೆಯನ್ನು ನೋಡಿಕೊಳ್ಳಬೇಕು. ಮುಂದೆ ಈ ಸಂಘಟನೆಯನ್ನು ಬೆಳೆಸುವಂತೆ ಕಾರ್ಯಕರ್ತರಲ್ಲಿ ರೈ ಮನವಿ ಮಾಡಿರುವ ವಿಚಾರ ವಿಲ್ ನಲ್ಲಿ ಉಲ್ಲೇಖವಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ