Breaking News

ಕುಡಿದ ಮತ್ತಿನಲ್ಲಿ ಗಗನಸಖಿಯೊಂದಿಗೆ ಅಸಭ್ಯ ವರ್ತನೆ: ವ್ಯಕ್ತಿ ಪೊಲೀಸರ ವಶಕ್ಕೆ

Spread the love

ವದೆಹಲಿ: ದುಬೈ-ಅಮೃತಸರಕ್ಕೆ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಗಗನಸಖಿಯೊಬ್ಬಳಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ವ್ಯಕ್ತಿಯನ್ನು ಪೊಲೀಸರು ಬಂದಿಸಿದ್ದಾರೆ.

ಪಂಜಾಬ್‌ನ ಜಲಂಧರ್‌ ಕೋಟ್ಲಿ ಗ್ರಾಮದವರಾದ ರಾಜಿಂದರ್ ಸಿಂಗ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಗಗನಸಖಿಯೊಂದಿಗೆ ಯಾವುದೋ ವಿಚಾರಕ್ಕೆ ಸಂಬಂಧಿಸಿ ವಾಗ್ವಾದಕ್ಕೆ ಇಳಿದಿದ್ದಾನೆ ಅಲ್ಲದೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಗಗನಸಖಿ ವಿಮಾನದ ಇತರ ಸಿಬಂದಿಗಳಲ್ಲಿ ಹೇಳಿಕೊಂಡಿದ್ದು ಘಟನೆಗೆ ಸಂಬಂಧಿಸಿ ಅಮೃತಸರದ ನಿಯಂತ್ರಣ ಕೊಠಡಿಗೆ ಮಾಹಿತಿ ರವಾನಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಮಾನ ಶ್ರೀ ಗುರು ರಾಮದಾಸ್ ಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ತನಿಖೆ ವೇಳೆ ವ್ಯಕ್ತಿ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ, ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಮತ್ತು ಸೆಕ್ಷನ್ 509 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ